More

    ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್ ಕುರಿತು​ ಗುಡ್ ನ್ಯೂಸ್! ಫೆ.17ರ ಅವಧಿ ವಿಸ್ತರಣೆ.. ವಿವರ ಇಲ್ಲಿದೆ ನೋಡಿ..

    ಬೆಂಗಳೂರು: 2019ರ ಮಾರ್ಚ್ 3ರ ಬಳಿಕ ರಸ್ತೆಗೆ ಇಳಿದಿರುವ ಹೊಸ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಸುವುದು ಕಡ್ಡಾಯವಾಗಿದೆ. ಆದರೆ, ಇದಕ್ಕೂ ಮುನ್ನ ನೋಂದಣಿಗೊಂಡ ವಾಹನಗಳಿಗೆ ಎಚ್​​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಸಾರಿಗೆ ಇಲಾಖೆ 2024ರ ಫೆಬ್ರವರಿ 17 ಕೊನೆಯ ದಿನಾಂಕ ಎಂದು ಘೋಷಿಸಿತ್ತು. ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ಅವಧಿಯನ್ನೂ ವಿಸ್ತರಣೆ ಮಾಡಿದ್ದಾರೆ.

    ಇದನ್ನೂ ಓದಿ: ಆಕ್ಸಿಸ್ ಬ್ಯಾಂಕ್ ಜತೆ ಒಪ್ಪಂದದ ಬಳಿಕ ಪೇಟಿಎಂ ಷೇರು ಏರಿಕೆ!

    ರಾಜ್ಯದಲ್ಲಿ ಎರಡು ಕೋಟಿಗೂ ಹೆಚ್ಚು ವಾಹನಗಳಿದ್ದು, ಗ್ರಾಮೀಣ ಜನರು ವಾಹನಗಳಿಗೆ ಇನ್ನೂ ಎಚ್​ಎಸ್​ಆರ್​ಪಿ ನೇಮ್ ಪ್ಲೇಟ್ ಅಳವಡಿಸಲು ಮುಂದೆ ಬರುತ್ತಿಲ್ಲ. ಆನ್​ಲೈನ್​ನಲ್ಲಿ ನೋಂದಣಿ ಮಾಡಬೇಕಿರುವ ಹಿನ್ನೆಲೆಯಲ್ಲಿ ಫೇಕ್​ ವೆಬ್ ಸೈಟ್ ಹಾವಳಿ ಹೆಚ್ಚಾಗಿದೆ. ಇದೆಲ್ಲವನ್ನು ಸರ್ಕಾರ ಗಮನಿಸಿದ್ದು, ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​​ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗಿದೆ. ಫೇಕ್​ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗಿದ್ದು, ಈ ಯೋಜನೆ ಪಾರದರ್ಶಕವಾಗಿದೆ ಎಂದು ಎಂದು ಅವರು ತಿಳಿಸಿದರು.

    ಏನಿದು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ?: ಈ ಎಚ್‌ಎಸ್‌ಆರ್‌ಪಿ ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗುತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್‌ಗಳಲ್ಲಿ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ. ಈ ಪ್ಲೇಟ್‌ನ ಮೇಲ್ಭಾಗದ ಎಡ ಬದಿಯಲ್ಲಿ ನೀಲಿ ಬಣ್ಣದ ಅಶೋಕ ಚಕ್ರದ ಮುದ್ರೆಯನ್ನು ಕಾಣಬಹುದು. 20 ಮಿಲಿ ಮೀಟರ್ ಉದ್ದ ಅಗಲದ ಈ ಮುದ್ರೆಯನ್ನು ಕ್ರೋಮಿಯಂ ಲೋಹ ಬಳಸಿ ತಯಾರಿಸಲಾಗಿರುತ್ತೆ.

    ಎಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ ಹೀಗಿದೆ…

    https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ, ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ, ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಬೇಕು. ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಬೇಕು. ಆದರೆ ನಗದು ರೂಪದಲ್ಲಿ ಮಾಡುವಂತಿಲ್ಲ. ಇದಾದ ಬಳಿಕ ನಿಮ್ಮ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನೆಯಾಗುತ್ತದೆ. ಆಗ ನಿಮ್ಮ ಅನುಕೂಲಕ್ಕೆ, ತಕ್ಕಂತೆ ಎಚ್​ಎಸ್​ಆರ್​ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಯ್ಕೆಮಾಡಿಕೊಳ್ಳಬೇಕಾಗುತ್ತದೆ.
    ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ. ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ ಎಚ್​ಎಸ್​ಆರ್​ಪಿ ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

    500-501ರ ನಡುವೆ ಅದೆಷ್ಟೋ ನಡೆಯಿತು.. ರವಿಚಂದ್ರನ್ ಅಶ್ವಿನ್ ಪತ್ನಿ ಹೀಗೆ ಹೇಳಿದ್ದರ ಹಿಂದಿನ ಮರ್ಮವೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts