More

    ಬಸ್​ ಮೇಲೆ ಹೈಟೆನ್ಷನ್ ತಂತಿ ಬಿದ್ದು ಹೊತ್ತಿಕೊಂಡ ಬೆಂಕಿ; ಮದುವೆ ಮನೆಯಿಂದ ಬರ್ತಿದ್ದ 6 ಮಂದಿ ಸಜೀವ ದಹನ

    ಉತ್ತರಪ್ರದೇಶ:  ಬಸ್​ ಮೇಲೆ ಹೈ ಟೆನ್ಷನ್ ತಂತಿ ಬಿದ್ದ ಪರಿಣಾಮ ಬೆಂಕಿ ಬೆಂಕಿ ಹೊತ್ತಿಕೊಂಡಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಗಾಜಿಪುರದಲ್ಲಿ ಸಂಭವಿಸಿದೆ.

    ಸ್ವಲ್ಪ ಸಮಯದಲ್ಲೇ ಬೆಂಕಿ ಭೀಕರ ಸ್ವರೂಪ ಪಡೆದುಕೊಂಡಿದ್ದು, ಬಸ್ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯಲ್ಲಿ ಆರು ಮಂದಿ ಸಜೀವ ದಹನವಾಗಿದ್ದಾರೆ. ಈ ಅವಘಡದಲ್ಲಿ ಹೆಚ್ಚಿನ ಸಾವು ನೋವು ಸಂಭವಿಸುವ ಸಾಧ್ಯತೆ ಇದೆ.

    ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದರು, ಬಸ್​ ಮೇಲೆ ವಿದ್ಯುತ್​ ತಂತಿ ಬಿದ್ದ ಪರಿಣಾಮ ಬಸ್​​ಗೆ ಬೆಂಕಿ ಹೊತ್ತಿಕೊಂಡಿದೆ. ವಿದ್ಯುತ್​ ತಂತಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು 6ಕ್ಕೂ ಅಧಿಕ ಪ್ರಯಣಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.

    ಡಿಎಂ, ಎಸ್​ಪಿ ಸೇರಿದಂತೆ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಬಸ್​ನಲ್ಲಿ 35ಕ್ಕೂ ಹೆಚ್ಚು ಮಂದಿ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸ್ಪಂಧಿಸಿ, ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts