

ಬೆಂಗಳೂರು: ರಾಜ್ಯದಲ್ಲಿ ಘನತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸಿ ಎಂದು ಉಚ್ಚ ನ್ಯಾಯಾಲಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೂಚನೆ ನೀಡಿದೆ.
ಘನತ್ಯಾಜ್ಯ ನಿರ್ವಹಣೆ ಸಂಬಂಧ ಪಿಐಎಲ್ಗಳ ವಿಚಾರಣೆ ವೇಳೆ ಸೂಚನೆ ನೀಡಿದ ರಾಜ್ಯ ಹೈಕೋರ್ಟ್, ಘನತ್ಯಾಜ್ಯ ನಿರ್ವಹಣೆ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಿ ಮತ್ತು ಸೂಕ್ತ ಕ್ರಮ ಜರುಗಿಸಬೇಕು ಎಂದು ತಿಳಿಸಿದೆ.
ಇದನ್ನೂ ಓದಿ: ಗ್ರಾಪಂ ಚುನಾವಣೆ ಗೆಲ್ಲಲಿ, ಬಿಜೆಪಿ ಮುಖಂಡರಿಗೆ ಸವಾಲು
ಘನತ್ಯಾಜ್ಯ ನಿರ್ವಹಣೆ ಬಗ್ಗೆ ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿತ್ತು. ಈ ವೇಳೆ ಪದೇ ಪದೇ ನಿಯಮ ಉಲ್ಲಂಘಿಸುವವರಿಗೆ ದಂಡದ ಜತೆಗೆ ಕ್ರಿಮಿನಲ್ ಪ್ರಕರಣ ಕೂಡ ದಾಖಲು ಮಾಡಿ ಎಂದು ಉಚ್ಚ ನ್ಯಾಯಾಲಯ ಪಾಲಿಕೆಗೆ ಸೂಚನೆ ನೀಡಿದೆ.