More

    ಹುಲಿ ದಾಳಿಗೆ ಅಧಿಕಾರಿಗಳೇ ನೇರ ಹೊಣೆ ಎಂದ ಹೈಕೋರ್ಟ್​ನ ಹಿರಿಯ ವಕೀಲ

    ಕೊಡಗು: ಕೊಡಗು ಜಿಲ್ಲೆಯಲ್ಲಿ ನಡೆದ ಹುಲಿ ದಾಳಿ ಪ್ರಕರಣದ ವಿಚಾರವಾಗಿ ರಾಜ್ಯ ಸರಕಾರ, ಅಧಿಕಾರಿಗಳ ವಿರುದ್ಧ ಕೆಪಿಸಿಸಿ‌ ಕಾನೂನು ಘಟಕದ ಅಧ್ಯಕ್ಷ ಹಾಗೂ ಹೈಕೋರ್ಟ್ ಹಿರಿಯ ವಕೀಲರಾಗಿರುವ ಎ.ಎಸ್.ಪೊನ್ನಣ್ಣ ವಾಗ್ದಾಳಿ ನಡೆಸಿದ್ದಾರೆ.

    ಇದನ್ನೂ ಓದಿ: ಹದಿಹರೆಯದ ಯುವಕ ಹಾಡಹಗಲೇ ಹುಲಿ ದಾಳಿಗೆ ಬಲಿ!

    ಎ.ಎಸ್ ಪೊನ್ನಣ್ಣ ಹುಲಿ ದಾಳಿಗೆ ಸಂಬಂಧಿಸಿದಂತೆ ಮಾತನಾಡಿದ್ದು ‘ಅಧಿಕಾರಿಗಳ ನಿರ್ಲಕ್ಷ್ಯದಿಂದ ಎರಡು ಸಾವು ಆಗಿದೆ. ಇದಕ್ಕೆ ಅಧಿಕಾರಿಗಳೇ ನೇರ ಹೊಣೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲು ಮಾಡಬೇಕು. ತನಿಖೆ ನಡೆಸಿ ಅವರ ವಿರುದ್ದ ಕ್ರಮ ಜರುಗಿಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು.

    ಇದನ್ನೂ ಓದಿ: ಯುವಕನ ಮೇಲೆ ಹುಲಿ ದಾಳಿ; ಮಗನನ್ನು ಹುಡುಕಲು ಹೋದ ತಂದೆಯ ಮೇಲೂ ಎರಗಿದ ವ್ಯಾಘ್ರ!

    ಸರಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು. ಹುಲಿ ದಾಳಿ ತಡೆಯಲು ಶಾಶ್ವತ ಪರಿಹಾರಕ್ಕೆ ಸರಕಾರ ಮುಂದಾಗುತ್ತಿಲ್ಲ. ನಾಟಕ ಮಾಡುವುದನ್ನು ಜನಪ್ರತಿನಿಧಿಗಳು ನಿಲ್ಲಿಸಬೇಕು. ಜನರ ಜೀವನದ ಜೊತೆ ಚೆಲ್ಲಾಟ ಆಡಬೇಡಿ’ ಎಂದು ಪೊನ್ನಣ್ಣ ಮಡಿಕೇರಿಯಲ್ಲಿ ಆಗ್ರಹ ಮಾಡಿದ್ದಾರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts