More

    ಗ್ಯಾರಂಟಿಯಿಂದ ಅಧಿಕ ಸ್ಥಾನ: ಸುರ್ಜೆವಾಲ ವಿಶ್ವಾಸ

    ಶಿವಮೊಗ್ಗ: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಗ್ಯಾರಂಟಿ ಘೋಷಿಸಿದಾಗ ಪ್ರಧಾನಿ ನರೇಂದ್ರ ಮೋದಿ ಸಹಿತ ಬಿಜೆಪಿ ನಾಯಕರು ಲೇವಡಿ ಮಾಡಿದ್ದರು. ಆದರೆ ಈಗ ಮೋದಿ ಪ್ರತಿ ಭಾಷಣದಲ್ಲಿ ಗ್ಯಾರಂಟಿ ಬಳಕೆ ಮಾಡುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲ ವ್ಯಂಗ್ಯವಾಡಿದರು.

    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಗ್ಯಾರಂಟಿ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿ, ಗ್ಯಾರಂಟಿಯಿಂದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸಂಪೂರ್ಣ ಬಹುಮತ ಲಭಿಸಿತು. ಈಗ ರಾಷ್ಟ್ರವ್ಯಾಪಿ ಗ್ಯಾರಂಟಿ ಘೋಷಿಸಿದ್ದೇವೆ. ಗ್ಯಾರಂಟಿ ಘೋಷಣೆಯು ಲೋಕಸಭೆ ಚುನಾವಣೆಯಲ್ಲಿ ನಮಗೆ ದೊಡ್ಡ ಮಟ್ಟದಲ್ಲಿ ಸಹಕಾರಿಯಾಗಲಿದೆ. ಕೇಂದ್ರದ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಶಿವಮೊಗ್ಗ ಕ್ಷೇತ್ರದಿಂದಲೇ ಬಿಜೆಪಿಗೆ ಶಾಕ್ ನೀಡಬೇಕು. ಮೊದಲ ಗೆಲುವನ್ನು ಇಲ್ಲಿಯೇ ದಾಖಲಿಸಬೇಕು. ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳನ್ನು ಜಾರಿ ಮಾಡಿದ ಹೆಗ್ಗಳಿಕೆ ಸರ್ಕಾರಕ್ಕಿದೆ. 10 ಕೆಜಿ ಅಕ್ಕಿ ನೀಡಲು ಕೇಂದ್ರ ಸರ್ಕಾರ ಅಡ್ಡಗಾಲು ಹಾಕಿತು. ಈಗ ಅಕ್ಕಿ ಬದಲು ಹಣವನ್ನು ಬ್ಯಾಂಕ್ ಖಾತೆಗೆ ಹಾಕುತ್ತಿದ್ದೇವೆ ಎಂದರು.
    ಪ್ರತಿ ವರ್ಷ ಮಹಿಳೆಯರಿಗೆ 1 ಲಕ್ಷ ರೂ, ಎಲ್ಲರಿಗೂ ನಗದು ರಹಿತ ಆರೋಗ್ಯ ಸೇವೆ, ರೈತರ ಬೆಳೆಗೆ ಗರಿಷ್ಠ ಬೆಲೆ, ಹೀಗೆ ವಿವಿಧ ಗ್ಯಾರಂಟಿಗಳನ್ನು ಘೋಷಿಸಲಾಗಿದೆ. ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗುವುದು. ಪಕ್ಷದ ಗೆಲುವಿಗೆ ಎಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದರು.
    ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ಎಸ್‌ಸಿ, ಎಸ್‌ಟಿ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts