More

    ಹೆಚ್ಚುವರಿ ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಕಚೇರಿಗೆ ಸಚಿವ ಜೋಶಿ ಮನವಿ

    ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಹೆದ್ದಾರಿಗಳನ್ನು ಸಂರ್ಪಸುವ ರಸ್ತೆಗಳ ನಿರ್ಮಾಣಕ್ಕೆ ಅನುಮೋದನೆ ಮತ್ತು ಕೇಂದ್ರ ರಸ್ತೆಗಳ ನಿಧಿಯನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.

    ಬುಧವಾರದಂದು ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಪ್ರಲ್ಹಾದ ಜೋಶಿ, ಕೇಂದ್ರ ಸರ್ಕಾರವು ಕರ್ನಾಟಕದಲ್ಲಿ ಅತಿ ಹೆಚ್ಚಿನ ರಾಷ್ಟ್ರೀಯ ಹೆದ್ದಾರಿಗಳ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದೆ. ಇದಕ್ಕಾಗಿ ಯೋಜನಾ ನಿರ್ದೇಶಕರ ಕಚೇರಿಗಳ ಸಂಖ್ಯೆಯನ್ನು 19 ಕ್ಕೆ ಹೆಚ್ಚಿಸಿದೆ. ಪ್ರತಿ 12 ಯೋಜನಾ ನಿರ್ದೇಶಕರ ಕಚೇರಿಗೆ ಒಂದು ಪ್ರಾದೇಶಿಕ ಕಚೇರಿ ವ್ಯವಸ್ಥೆ ಪ್ರತಿ ರಾಜ್ಯಕ್ಕೂ ಇದ್ದು, ಈಗ ಕರ್ನಾಟಕದಲ್ಲಿ ಯೋಜನಾ ನಿರ್ದೇಶಕರ ಸಂಖ್ಯೆ ಹೆಚ್ಚಾಗಿರುವ ಹಿನ್ನಲೆಯಲ್ಲಿ ಕರ್ನಾಟಕಕ್ಕೆ ಹೆಚ್ಚುವರಿ ಪ್ರಾದೇಶಿಕ ಕಚೇರಿಯನ್ನು ಸ್ಥಾಪಿಸಲು ಮನವಿ ಸಲ್ಲಿಸಿದರು.

    ಎಕ್ಸ್​ಪ್ರೆಸ್ ಹೈವೇ ಮೇಲ್ದರ್ಜೆಗೆ ಏರಿಸುವ ಭಾರತಮಾಲಾ ಯೋಜನೆಯಡಿ ಅಂಕೋಲಾ-ಹುಬ್ಬಳ್ಳಿ-ವಿಜಯಪುರ ಹೆದ್ದಾರಿಯನ್ನು ನಾಲ್ಕು ಲೇನ್ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾಡಲು ಈಗಾಗಲೇ ನವಲಗುಂದ ಬೈಪಾಸ್ ರಸ್ತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರಡು ಡಿಪಿಆರ್ ಅನ್ನು ಕೇಂದ್ರಕ್ಕೆ ಸಲ್ಲಿಸಿದೆ. ಅದನ್ನು ಆದಷ್ಟು ಬೇಗನೆ ಅನುಮೋದಿಸಿ, ರಾಜ್ಯ ಸರ್ಕಾರಕ್ಕೆ ಮರಳಿಸುವಂತೆ ಕೋರಿದರು.

    ಈಗಾಗಲೇ ಹುಬ್ಬಳ್ಳಿ-ಧಾರವಾಡದ ಹಲವು ಆಂತರಿಕ ರಸ್ತೆ ಯೋಜನೆಗಳಿಗೆ ಸಾಕಷ್ಟು ಅನುದಾನ ನೀಡಲಾಗಿದೆ. ಆಂತರಿಕ ರಸ್ತೆಗಳ ಅಭಿವೃದ್ಧಿಗೆ ಸಿಆರ್​ಎಫ್ ಅಡಿಯ ಇನ್ನೂ ಹೆಚ್ಚುವರಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

    ಮನವಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ ಸಚಿವ ನಿತಿನ್ ಗಡ್ಕರಿ, ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಹೇಳಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ವಿಧಾನ ಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಈ ಸಂದರ್ಭದಲ್ಲಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts