More

  ಹೆದ್ದಾರಿ ಕಾಮಗಾರಿ ಸ್ಥಗಿತದಿಂದ ತೊಂದರೆ

  ಲಿಂಗಸುಗೂರು: ಪಟ್ಟಣದಲ್ಲಿ ಹಾದು ಹೋಗಿರುವ ಹೆದ್ದಾರಿ ಕಾಮಗಾರಿ ಸ್ಥಗಿತಗೊಳಿಸಲಾಗಿದ್ದು, ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ರಸ್ತೆ ಹದಗೆಟ್ಟು ಸಂಚಾರಕ್ಕೆ ತೊಂದರೆಯಾಗಿದೆ. ಕೂಡಲೇ ಕಾಮಗಾರಿ ಆರಂಭಿಸುವ ಜತೆಗೆ ಹೆದ್ದಾರಿಗಾಗಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರ ಪಟ್ಟಣದ ಬಸವಸಾಗರ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

  ಕೆಲ ತಿಂಗಳ ಹಿಂದೆ ಆರಂಭಿಸಿದ ಹೆದ್ದಾರಿ ಕಾಮಗಾರಿ ಕುಂಟುತ್ತಾ ಸಾಗಿದೆ. ಒಂದು ಬದಿ ರಸ್ತೆ ಅಗೆದು ಮರಂ ಹಾಕಲಾಗುತ್ತಿದೆ. ಮಳೆಯಿಂದ ಕೆಸರು ಗದ್ದೆಯಂತಾಗಿರುವ ರಸ್ತೆಯಲ್ಲಿ ವಾಹನ ಸವಾರರು ಅಪಘಾತ ಭೀತಿಯಲ್ಲಿ ಸಂಚರಿಸುವಂತಾಗಿದೆ. ಹೆದ್ದಾರಿ ಕಾಮಗಾರಿ ನಿಗದಿಯಂತೆ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಶಾಸಕ ತಾಕೀತು ಮಾಡಬೇಕು. ರೈತರಿಗೆ ಭೂ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಲಾಯಿತು.

  ರಾಜ್ಯೋತ್ಸವ ರಸಪ್ರಶ್ನೆ - 23

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts