More

    ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ; 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್​​ ಅಸ್ತು

    ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್​ ಅನುಮತಿ ನೀಡಿದೆ.

    ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಅಲ್ಲದೆ, ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದೆ.

    ಇದನ್ನೂ ಓದಿ: ಐಪಿಎಲ್​ ಉದ್ಘಾಟನಾ ಪಂದ್ಯಕ್ಕೆ ಮಳೆ ಭೀತಿ; ಚೆಪಾಕ್​ ಅಂಗಳ ಯಾರಿಗೆ ಹೆಚ್ಚು ಸಹಕಾರಿ? ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್​

    ಬೋರ್ಡ್ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಕೋರ್ಟ್ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ವಿಭಾಗೀಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೇ, ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ, ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್​​ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ್ದು, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರೆಸಲು ಆದೇಶಿಸಿದೆ.

    ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚಿಸಿದೆ. ಈ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ರುಪ್ಸಾ ಹಾಗೂ ಅವರ್ಸ್ ಸ್ಕೂಲ್ ಸಲ್ಲಿಸಿದ ಮನವಿಯನ್ನೂ ಇದೇ ವೇಳೆ ತಿರಸ್ಕರಿಸಿದ ವಿಭಾಗೀಯ ಪೀಠ. ತಡೆಯಾಜ್ಞೆಯನ್ನು ಸುಪ್ರೀಂಕೋರ್ಟ್ ಅಲ್ಲೇ ಕೋರುವಂತೆ ತಿಳಿಸಿ ಅರ್ಜಿಯನ್ನು ಇತ್ಯರ್ಥ ಪಡಿಸಿರುವುದಾಗಿ ಹೇಳಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts