More

    ಕಾಲೇಜಲ್ಲಿ ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ದೂರು..

    ಮಂಗಳೂರು: ಒಂದು ಹಂತಕ್ಕೆ ತಣ್ಣಗಾಗಿದ್ದ ಹಿಜಾಬ್ ವಿವಾದ ಕೆಲವು ದಿನಗಳಿಂದ ಮತ್ತೆ ಮುನ್ನೆಲೆಗೆ ಬಂದಿದ್ದು, ಅಲ್ಲಲ್ಲಿ ಪುನಃ ಸದ್ದು ಮಾಡಲಾರಂಭಿಸಿದೆ. ಅದರಲ್ಲೂ ಇಲ್ಲೊಂದು ಕಡೆ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

    ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ಪ್ರಕರಣ ಇದೀಗ ಶಾಸಕರವರೆಗೂ ತಲುಪಿದೆ. ಕಾಲೇಜು ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ದೂರು ನೀಡಿದ್ದಾರೆ.

    ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಪಾಲಿಸಲು ನಿರ್ಲಕ್ಷ್ಯ ವಹಿಸಲಾಗುತ್ತಿದೆ. ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಲಾಗುತ್ತಿದೆ. ಈ ಬಗ್ಗೆ ಸಾಕಷ್ಟು ಬಾರಿ ಪ್ರಾಂಶುಪಾಲರಿಗೆ ಮನವಿ ಮಾಡಲಾಗಿದ್ದರೂ ಪ್ರಯೋಜನ ಆಗಿಲ್ಲ ಎಂದು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಶಾಸಕರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

    ಜೂನ್ 2ರಂದು ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಗುಂಪನ್ನು ರಕ್ಷಿಸಲು ಪ್ರಾಂಶುಪಾಲರ ಯತ್ನಿಸಿದ್ದಾರೆ. ಕಾಲೇಜಿನ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಡಿಲೀಟ್ ಮಾಡಿಸಿದ್ದಾರೆ. ಪತ್ರಕರ್ತರ ಮೇಲೆ ಗುಂಪು ಹಲ್ಲೆ ಮಾಡುತ್ತಿದ್ದರೂ ಪ್ರಾಂಶುಪಾಲರು ಪೊಲೀಸರನ್ನು ಕರೆಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಿದ್ಯಾರ್ಥಿಗಳು ದೂರು ನೀಡಿದ್ದಾರೆ.

    ಕಾಲೇಜಲ್ಲಿ ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ದೂರು.. ಕಾಲೇಜಲ್ಲಿ ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ದೂರು.. ಕಾಲೇಜಲ್ಲಿ ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ದೂರು..

    ನಾನು ಏನು ಹೇಳುತ್ತೇನೋ ಅದನ್ನು ಮಾತ್ರ ಮಾಡುತ್ತೇನೆ… ಶುರುವಾಯ್ತು ಉಪ್ಪಿ ‘UI’

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts