More

    ಹಿಜಾಬ್-ಕೇಸರಿ ಶಾಲು ವಿವಾದ ಅಂತ್ಯವಾಗಲಿ: ಗಂಗಾವತಿ ತಹಸೀಲ್ದಾರ್‌ಗೆ ಸಿಪಿಐಎಂ ತಾಲೂಕು ಸಮಿತಿ ಮನವಿ

    ಗಂಗಾವತಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸರ್ಕಾರ ಅಂತ್ಯ ಹಾಡಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ತಾಲೂಕು ಸಮಿತಿ ಸದಸ್ಯರು ಶುಕ್ರವಾರ ತಾಲೂಕು ಆಡಳಿತ ಸೌಧದ ಮುಂದೆ ಪ್ರತಿಭಟನೆ ನಡೆಸಿ ಗ್ರೇಡ್ 2 ತಹಸೀಲ್ದಾರ್ ವಿ.ಎಚ್.ಹೊರಪೇಟಿಗೆ ಮನವಿ ಸಲ್ಲಿಸಿದರು.

    ತಾಲೂಕು ಕಾರ್ಯದರ್ಶಿ ನಿರುಪಾದಿ ಬೆಣಕಲ್ ಮಾತನಾಡಿ, ಕರಾವಳಿ ಪ್ರದೇಶದಲ್ಲಿ ಆರಂಭವಾದ ಹಿಜಾಬ್ ಮತ್ತು ಕೇಸರಿ ಶಾಲು ಪ್ರಕರಣ ಶೈಕ್ಷಣಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರಿದ್ದು, ನಿಯಂತ್ರಿಸುವಲ್ಲಿ ಸರ್ಕಾರ ವಿಲವಾಗಿದೆ. ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತೆ ಸಚಿವರು ಮತ್ತು ಶಾಸಕರು ಹೇಳಿಕೆ ನೀಡುತ್ತಿರುವುದು ಖಂಡನೀಯ. ಶಿಕ್ಷಣ ಕ್ಷೇತ್ರವನ್ನು ಕೇಸರೀಕರಣಗೊಳಿಸಲು ಸರ್ಕಾರ ಹುನ್ನಾರ ನಡೆಸಿದೆ. ವಿವಾದಕ್ಕೆ ಅಂತ್ಯ ಹಾಡಬೇಕು ಎಂದು ಆಗ್ರಹಿಸಿದರು. ಪದಾಧಿಕಾರಿಗಳಾದ ಮಂಜುನಾಥ ಡಗ್ಗಿ, ಬಾಳಪ್ಪ ಹುಲಿಹೈದರ್, ಶಿವಣ್ಣಬೆಣಕಲ್, ಮುತ್ತಣ್ಣ ದಾಸನಾಳ್, ಶ್ರೀನಿವಾಸ, ಬಸವರಾಜ ಮರಕುಂಬಿ, ಕೃಷ್ಣಪ್ಪ, ನಬೀಸಾಬ್, ಮರಿನಾಗಪ್ಪ, ಬಾಲಪ್ಪ, ರಜಾಕ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts