More

    ಪಾಕ್ ಆಕ್ರಮಿತ ಕಾಶ್ಮೀರದ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು, ವಿದ್ಯಾರ್ಥಿನಿಯರಿಗೆ ಹಿಜಾಬ್ ಕಡ್ಡಾಯ!

    ಶ್ರೀನಗರ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಶಿಕ್ಷಣ ಸಂಸ್ಥೆಗಳಲ್ಲಿ ಮಹಿಳಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಹಿಜಾಬ್ ಕಡ್ಡಾಯಗೊಳಿಸಲಾಗಿದೆ.

    ಸ್ಥಳೀಯ ಆಡಳಿತದ ಅಧಿಸೂಚನೆಯ ಪ್ರಕಾರ, ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಮಹಿಳಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹಿಜಾಬ್ ಧರಿಸುವುದು ಕಡ್ಡಾಯವಾಗಿದೆ. ಆದೇಶ ಉಲ್ಲಂಘಿಸಿದರೆ ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಸ್ಥಳೀಯ ಪತ್ರಕರ್ತೆಯೊಬ್ಬರು ಈ ಬಗ್ಗೆ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಮಹಿಳೆಯರಿಗೆ ಅವರು ಧರಿಸುವುದನ್ನು ಆಯ್ಕೆ ಮಾಡುವ ಸ್ವಾತಂತ್ರ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    ಇದನ್ನೂ ಓದಿ: ರೈಲಿನ ಕೊನೆಯ ಬೋಗಿ ಹಿಂದೆ ಇರುವ ‘X’ ಚಿಹ್ನೆಯ ಅರ್ಥವೇನು?

    ಪಾಕಿಸ್ತಾನವು ತೀವ್ರ ಆರ್ಥಿಕ ಪರಿಸ್ಥಿತಿಯಿಂದ ಬಳಲುತ್ತಿದೆ. ಅದರಲ್ಲೂ ಮುಜಾಫರಾಬಾದ್ ಸೇರಿದಂತೆ ಪಿಒಕೆಯ ವಿವಿಧ ಭಾಗಗಳಲ್ಲಿ ಅನೇಕ ಕುಟುಂಬಗಳು ತೀರಾ ಬಡತನದಲ್ಲಿದ್ದು, ಹಸಿವಿನಿಂದ ಬಳಲುತ್ತಿದ್ದಾರೆ. ಈ ನಡುವೆ ಪಿಒಕೆಯಲ್ಲಿ ಸಾವಿರಾರು ಜನರು ಉದ್ಯೋಗ ಕಳೆದುಕೊಂಡಿದ್ದಾರೆ ಮತ್ತು ಅವರ ಕುಟುಂಬಗಳು ತೀವ್ರ ಸಂಕಷ್ಟದಲ್ಲಿವೆ.

    ಮಹಿಳಾ ದಿನಾಚರಣೆ; ನಾಳೆ BMTCಯಲ್ಲಿ ಉಚಿತ ಪ್ರಯಾಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts