ಹೆಬ್ರಿ: ಆಗುಂಬೆ ಘಾಟಿಯ 4, 5ನೇ ತಿರುವಿನಲ್ಲಿ ಶನಿವಾರ ರಾತ್ರಿ ಗುಡ್ಡ ಕುಸಿತವಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಆಗುಂಬೆ ಪೊಲೀಸರು ಜರಿದ ಮಣ್ಣು ಕಲ್ಲು, ಮರ ತೆರವುಗೊಳಿಸುವ ಕಾರ್ಯ ನಡೆಸಿದ್ದಾರೆ.
ನಿರ್ಬಂಧ ಹೇರಿದ ಜಿಲ್ಲಾಡಳಿತ
ಪಶ್ಚಿಮಘಟ್ಟದ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ವಾಹನ ಸವಾರರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ. ವಾಹನ ಸಂಚಾರಕ್ಕೆ ಯಾವುದೇ ತೊಡಕಾಗಿಲ್ಲ. ಕೆಲವು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಘನವಾಹನ ಸಂಚರಿಸದಂತೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ. ಹೆದ್ದಾರಿ ಪ್ರಾಧಿಕಾರದವರು ಸ್ಥಳದಲ್ಲಿ ಬೀಡುಬಿಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.