ಮನೆ ಮೇಲೇ ಕುಸಿದ ಗುಡ್ಡ, ಮಣ್ಣಿನಡಿ ಸಿಲುಕಿಕೊಂಡಿದ್ದಾರೆ ಇಬ್ಬರು ಮಕ್ಕಳು...

Hill
Published on

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಗುಡ್ಡವೊಂದು ಮನೆಯ ಮೇಲೇ ಕುಸಿದು, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ ದಯನೀಯ ಘಟನೆಯೊಂದು ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಕುಶಾಲಪ್ಪ ಎಂಬವರ ಮನೆ ಮೇಲೆ ಗುಡ್ಡ ಕುಸಿದಿದ್ದು, ಶ್ರುತಿ (11), ಗಾನ (6) ಎಂಬ ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದ ಮನೆ ನೆಲಸಮವಾಗಿದೆ.

ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯಾಡಳಿತದವರು ದೌಡಾಯಿಸಿದ್ದು, ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಲಾಗುತ್ತಿದೆ. ಆ ಮೂಲಕ ಮಕ್ಕಳನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net