More

    ‘ಕೈ’ಗೊಲಿದ ಹಿಮಾಚಲಕ್ಕೆ ಹೊಸ ಸಿಎಂ; ನಾಳೆ ಪ್ರಮಾಣ ವಚನ ಸ್ವೀಕಾರ…

    ಶಿಮ್ಲಾ: ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿದ ಹಿಮಾಚಲ ಪ್ರದೇಶದ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಪ್ರಶ್ನೆ ಎದ್ದಿತ್ತು. ಶುಕ್ರವಾರ ಸಂಜೆ ನಡೆದ ಶಾಸಕಾಂಗ ಸಭೆಯಲ್ಲೂ ಯಾವುದೇ ನಿರ್ಧಾರಕ್ಕೆ ಬರಲಾಗಲಿಲ್ಲ. ಈಗ ಈ ವಿಚಾರವಾಗಿ ಕಾಂಗ್ರೆಸ್​ ಹೈಕಮಾಂಡ್​ ನಿರ್ಧಾರ ತೆಗೆದುಕೊಂಡಿದೆ.

    ಸಿಎಂ ಹುದ್ದೆ ರೇಸಿನಲ್ಲಿ ಹಿಮಾಚಲದ ಕಾಂಗ್ರೆಸ್‌ ಅಧ್ಯಕ್ಷೆ ಪ್ರತಿಭಾ ಸಿಂಗ್, ಮಾಜಿ ಅಧ್ಯಕ್ಷ ಸುಖ್ ವಿಂದರ್ ಸಿಂಗ್ ಸುಖ ಮತ್ತು ವಿರೋಧ ಪಕ್ಷದ ನಾಯಕರಾಗಿದ್ದ ಮುಕೇಶ್ ಅಗ್ನಿಹೋತ್ರಿ ನಡುವೆ ತೀವ್ರ ಪೈಪೋಟಿ ಉಂಟಾಗಿತ್ತು.

    ಈಗ ಹೈಕಮಾಂಡ್​ ಒಂದು ನಿರ್ಧಾರಕ್ಕೆ ಬಂದಿದ್ದು, ಹಿಮಾಚಲದ ಮುಂದಿನ ಮುಖ್ಯಮಂತ್ರಿಯಾಗಿ ಸುಖ್ವಿಂದರ್​ ಸಿಂಗ್​ರನ್ನು ಆಯ್ಕೆ ಮಾಡಿದೆ.
    ಕಾಂಗ್ರೆಸ್​ನ ಹಿಮಾಚಲ ಪ್ರದೇಶದ ಉಸ್ತುವಾರಿ ಸಚಿವ ರಾಜೀವ್ ಶುಕ್ಲಾ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಭೂಪೇಶ್ ಬಾಘೇಲ್, ಹಿಮಾಚಲ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ವೀರಭದ್ರ ಸಿಂಗ್ ಮತ್ತು ಇತರ ಹಲವಾರು ಕಾಂಗ್ರೆಸ್ ನಾಯಕರು ಹೊಸ ನಾಯಕನ ಆಯ್ಕೆಯ ವಿಚಾವಾಗಿ ಶಿಮ್ಲಾದಲ್ಲಿದ್ದರು. ಸುಖ್ವಿಂದರ್​ ಸಿಂಗ್​ರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಿದ್ದು ಮುಖೇಶ್ ಅಗ್ನಿಹೋತ್ರಿ ಉಪಮುಖ್ಯಮಂತ್ರಿಯಾಗಲಿದ್ದಾರೆ. ಎಂದು ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್ ಹೇಳಿದ್ದಾರೆ.

    ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನನ ಕಾರ್ಯಕ್ರಮ ನಡೆಯಲಿದ್ದು ಹೊಸ ಸರ್ಕಾರ ಬಬದಲಾವಣೆ ತರಲಿದೆ ಎಂದು ಛತ್ತೀಸ್​ಗಢ ಮುಖ್ಯಮಂತ್ರಿ ಹೇಳಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts