

ಶಿಮ್ಲಾ: ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಉತ್ತರಭಾರತದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಅಬ್ಬರಿಸುತ್ತಿದ್ದು, ಇದೀಗ ಹಿಮಾಚಲಪ್ರದೇಶದಲ್ಲಿ ಮೇಘಸ್ಪೋಟಗೊಂಡಿದೆ.
ಹಿಮಾಚಲಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆಗೆ ಸಂಬಂಧಿಸಿದ ಅವಘಢಗಳಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಕಣ್ಮರೆಯಾಗಿದ್ದಾರೆ. ಮಳೆಯ ಆರ್ಭಟಕ್ಕೆ ಭೂಕುಸಿತ ಉಂಟಾಗಿ ಕಟ್ಟಡಗಳೆಲ್ಲಾ ನೆಲಸಮಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ಸಾಗಿದೆ.
ಮಳೆ ಸಂಬಂಧಿಸಿದ ಅವಘಡದಲ್ಲಿ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದ್ದು, ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಷಾ ಮುಖ್ಯಮಂತ್ರಿ ಸುಖ್ವಿಂದರ್ ಸುಖು ಅವರಿಂದ ಮಾಹಿತಿ ಪಡೆದಿದ್ದಾರೆ. ಇದಲ್ಲದೆ ಕೇಂದ್ರ ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹಿಮಾಚಲಪ್ರದೇಶದ ಶಿಮ್ಲಾ, ಮಂಡಿ, ಕುಲು ಸೇರಿದಂತೆ ರಾಜ್ಯಾದ ಹಲವೆಡೆ ಭಾರೀ ಮಳೆಯಾಗುತ್ತಿದೆ.