More

    ಹಿಂಡಲಗಾ ಜಾತ್ರೆಗೆ ಅಗತ್ಯ ಸೌಲಭ್ಯ ಕಲ್ಪಿಸಿ

    ಬೆಳಗಾವಿ: ತಾಲೂಕಿನ ಹಿಂಡಲಗಾ ಗ್ರಾಮದಲ್ಲಿ 100 ವರ್ಷಗಳ ಬಳಿಕ ಗ್ರಾಮದೇವತೆ ಮಹಾಲಕ್ಷ್ಮೀ ಜಾತ್ರೆ ಜರುಗುತ್ತಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಬುಧವಾರ ಭೇಟಿ ಮಾಡಿ ಚರ್ಚಿಸಿದರು.

    ಕಳೆದ ವರ್ಷವೇ ನಡೆಯಬೇಕಿದ್ದ ಜಾತ್ರೆ ಕರೊನಾ ಹಿನ್ನೆಲೆಯಲ್ಲಿ ರದ್ದಾಗಿತ್ತು. ಈ ಬಾರಿ ಮಾ. 16ರಿಂದ 20ರ ವರೆಗೆ ಅದ್ದೂರಿಯಾಗಿ ಜಾತ್ರೆ ಆಯೋಜನೆಗೆ ತೀರ್ಮಾನಿಸಲಾಗಿದೆ. ಜಾತ್ರೆಗೆ ಯಾವುದೇ ಅಡ್ಡಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಭಕ್ತರಿಗೆ ಅಗತ್ಯ ಮೂಲ ಸೌಲಭ್ಯ, ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು.

    ಜಾತ್ರಾ ಸಮಿತಿ ಅಧ್ಯಕ್ಷ ಕೃಷ್ಣ ಪಾವಸೆ, ಅಶೋಕ ಕಾಂಬಳೆ, ಚೇತನಾ ಅಗಸಗೇಕರ್, ರಾಮಚಂದ್ರ ಕುದ್ರೇಮನಿ, ಪ್ರಕಾಶ ಬೆಳಗುಂದಕರ್, ಪ್ರವೀಣ ಪಾಟೀಲ, ಶ್ರೀಕಾಂತ ಜಾಧವ, ರಾಜು ಕುಪ್ಪೇಕರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts