ಹಿಂದಿ ಭಾಷೆ ಉಳಿಸಲು ಸಹಕಾರ : ಶಿಕ್ಷಕಿ ಮಮತಾ ಎನ್.ಹೊಳ್ಳ ಆಶಯ

hindi
Published on

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಿಸಲಾಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಿಂದಿ ಶಿಕ್ಷಕಿ ಮಮತಾ ಎನ್.ಹೊಳ್ಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದಿ ದಿವಸದ ಮಹತ್ವ, ಹಿಂದಿ ಭಾಷೆಯನ್ನು ಉಳಿಸಿ ಬೆಳೆಸುವುದು ಅದಕ್ಕೆ ನಮ್ಮೆಲ್ಲರ ಸಹಕಾರ ಮತ್ತು ಶ್ರಮ ಅಗತ್ಯವಿದೆ ಎಂದರು.

ಹಿಂದಿ ಭಾಷಣ, ಹಿಂದಿ ಗೀತ ಗಾಯನ, ಹಿಂದಿ ಕಥೆ ರಚನೆಯ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹತ್ತನೇ ತರಗತಿಯ ಯಶಸ್ ಡಿ.ಕಾರ್ಯಕ್ರಮ ನಿರೂಪಿಸಿದರು. 9ನೇ ತರಗತಿಯ ಅನಘ ಸ್ವಾಗತಿಸಿ, ಯಶ್ವಿ ಅತಿಥಿಗಳನ್ನು ಪರಿಚಯಿಸಿ, ಹ್ಯಾಪಿ ವಂದಿಸಿದರು.

ಶಾಲಾ ಮುಖ್ಯಶಿಕ್ಷಕಿ ಹೇಮಲತಾ ಎಂ.ಆರ್.ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಿಂದಿ ಶಿಕ್ಷಕಿ ಮೆನಿತ ಕೆ.ಎಂ.ಮತ್ತು ಮಂಜುನಾಥ್ ಕಾರ್ಯಕ್ರಮ ಸಂಯೋಜಿಸಿದರು. ಶಿಕ್ಷಕಿ ಸುಮಲತ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net