More

    ಉಡುಪಿಯಲ್ಲಿ ಹಿಂದೂ ವಿದ್ಯಾರ್ಥಿನಿಯರನ್ನು ಗುರಿಯಾಗಿರಿಸಿ ನಗ್ನ ವಿಡಿಯೋ ಚಿತ್ರಿಕರಣ, ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷದ್ ಆಗ್ರಹ

    ಮಂಗಳೂರು: ಉಡುಪಿಯ ಪ್ರಸಿದ್ಧ ನೇತ್ರ ಜ್ಯೋತಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು, ಶೌಚಾಲಯದಲ್ಲಿ ಅವರ ನಗ್ನ ವಿಡಿಯೋ ಚಿತ್ರೀಕರಿಸಿ ಅದನ್ನು ಯುವಕರಿಗೆ ಹಂಚಿರುವ ವಿಷಯ ನಮ್ಮ ಗಮನಕ್ಕೆ ಬಂದಿದ್ದು, ಈಬಗ್ಗೆ ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.

    ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಿಗೆ ಈಬಗ್ಗೆ ಮಂಗಳೂರಿನಲ್ಲಿ ಮನವಿ ಸಲ್ಲಿಸಿದ ವಿಶ್ವ ಹಿಂದೂ ಪರಿಷದ್‌ಕಾರ್ಯಕರ್ತರು, ವಿಡಿಯೋ ಚಿತ್ರೀಕರಣದ ಮೂಲಕ ಹಿಂದೂ ಯುವತಿಯರ ಮಾನಹಾನಿ ಮಾಡಿ ಬ್ಲಾಕ್ ಮೇಲ್ ಮಾಡುವ ಹುನ್ನಾರವಿರಬಹುದು. ಈ ವಿಡಿಯೋ ಚಿತ್ರೀಕರಣದ ಹಿಂದೆ ನಿಷೇಧಿತ ಇಸ್ಲಾಮಿಕ್ ಸಂಘಟನೆಯ ಕೈವಾಡವಿದ್ದು ವ್ಯವಸ್ಥಿತ ತಂಡ ಕಾರ್ಯಾಚರಿಸುತ್ತಿರುವ ಸಂಶಯ ವ್ಯಕ್ತವಾಗುತ್ತಿದೆ. ಆದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಯನ್ನು ನಡೆಸಬೇಕೆಂದು ಆಗ್ರಹಿಸಿ ಪಶ್ಚಿಮವಲಯ ಪೊಲೀಸ್ ಮಹಾನಿರೀಕ್ಷಕರು ಡಾ. ಚಂದ್ರಗುಪ್ತ ಅವರಿಗೆ ಮನವಿ ಸಲ್ಲಿಸಿದರು.

    ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್, ವಿಭಾಗ ಕಾರ್ಯದರ್ಶಿ ದೇವಿಪುಸಾದ್ ಶೆಟ್ಟಿ, ವಿಭಾಗ ಸಂಯೋಜಕ ಭುಜಂಗ ಕುಲಾಲ್, ವಿಭಾಗ ಸಹ ಸಂಯೋಜಕ ಪುನಿತ್ ಅತ್ತಾವರ ಇದ್ದರು.

    ಮುಸ್ಲಿಂ ಯುವತಿಯರ ಮೇಲೆ ಕೇಸು ದಾಖಲಿಸಿ

    ಪ್ಯಾರಾ ಮೆಡಿಕಲ್ ಡಿಪ್ಲೋಮ ಕಲಿಯುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರಾದ ಶಬನಾಜ್, ಅಲ್ವಿಯಾ, ಮತ್ತು ಅಲಿಮಾತುಲ್ ಶಾಫಿಯ ಎಂಬವರು ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಕೆಮರಾ ಇಟ್ಟು ಹಿಂದೂ ವಿದ್ಯಾರ್ಥಿನಿಯರ ನಗ್ನ ವಿಡಿಯೋ ಚಿತ್ರೀಕರಣ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಷಯ ಬಹಿರಂಗವಾಗಿರುತ್ತದೆ. ಸಂತ್ರಸ್ತ ಹಿಂದೂ ವಿದ್ಯಾರ್ಥಿನಿಗೆ ಕೇಸು ದಾಖಲಿಸದಂತೆ ಒತ್ತಡ ನೀಡುತ್ತಿದ್ದು, ಈ ವಿಷಯವನ್ನು ಬಹಿರಂಗ ಪಡಿಸದಂತೆ ಕಿರುಕುಳ ನೀಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಅಲ್ಲದ ಈಗಾಗಲೇ ಈ ತರಹದ ಘಟನಗಳು ಸುಮಾರು ಒಂದು ವರ್ಷದಿಂದ ನಡೆಯುತ್ತಿರುವ ಬಗ್ಗೆ ಆ ಕಾಲೇಜಿನ ವಿದ್ಯಾರ್ಥಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಅದರಿಂದ ಆ ಮೂವರು ವಿದ್ಯಾರ್ಥಿನಿಯರ ವಿಚಾರಣೆಗೆ ಒಳಪಡಿಸಿ, ತಕ್ಷಣ ಅವರ ಮೇಲೆ ಕೇಸು ದಾಖಲಿಸಿ ಮತ್ತು ಇದರ ಹಿಂದೆ ಇರುವ ಜಾಲವನ್ನು ಪತ್ತೆಹಚ್ಚಿ ಸತ್ಯಾಸತ್ಯತೆಯನ್ನು ಬಹಿರಂಗ ಪಡಿಸಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್ ಆಗ್ರಹಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts