More

    ನೇಹಾ ಕೊಲೆ ಖಂಡಿಸಿ ಹಿಂದು ಜಾಗರಣಾ ವೇದಿಕೆ ಪ್ರತಿಭಟನೆ

    ಶಿವಮೊಗ್ಗ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ಖಂಡಿಸಿ ಹಿಂದು ಜಾಗರಣಾ ವೇದಿಕೆ ಪದಾಧಿಕಾರಿಗಳು ಶನಿವಾರ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

    ವೇದಿಕೆ ಜಿಲ್ಲಾ ಸಂಚಾಲಕ ದೇವರಾಜ್ ಹರಳಿಹಳ್ಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪದಾಧಿಕಾರಿಗಳು, ನೇಹಾ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಆ ಮೂಲಕ ನೇಹಾ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
    ಜಿಲ್ಲಾ ಸಂಚಾಲಕ ದೇವರಾಜ್ ಹಾಲಳ್ಳಿ ಮಾತನಾಡಿ, ರಾಜ್ಯದಲ್ಲಿ ಜಿಹಾದಿಗಳ ಪುಂಟಾಡ ಹೆಚ್ಚಾಗುತ್ತಿದೆ. ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಅವರನ್ನು ಕಾಲೇಜು ಕ್ಯಾಂಪಸ್‌ಗೆ ನುಗ್ಗಿ ಬರ್ಬರವಾಗಿ ಹತ್ಯೆ ಮಾಡಿರುವುದು ಅಮಾನವೀಯ ಕೃತ್ಯ. ಪ್ರೀತಿಗೆ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದಾನೆ ಎಂದರೆ ಆತನ ಮನಸ್ಥಿತಿ ಹೇಗಿದೆ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು. ಕರ್ನಾಟಕದಲ್ಲಿ ಹಾಡಹಗಲೇ ಕೊಲೆಗಳು ನಡೆಯುತ್ತಿವೆ. ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದ್ದು ಇಡೀ ರಾಜ್ಯದ ಜನತೆ ತಲೆ ತಗ್ಗಿಸುವಂತಾಗಿದೆ ಎಂದರು.
    ತೀರ್ಥಹಳ್ಳಿಯ ಜಿಹಾದಿಗಳನ್ನು ಮಂಗಳೂರಿನ ಕದ್ರಿ ದೇವಸ್ಥಾನದಲ್ಲಿ ಇರಿಸಲು ಯತ್ನಿಸಿದ್ದರು. ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇರಿಸಿದ್ದರು. ಈ ಜಿಹಾದಿಗಳ ವಿಚಾರದಲ್ಲಿ ತಂದೆ-ತಾಯಿಗಳು ಜಾಗೃತರಾಗಬೇಕಿದೆ. ನಮ್ಮ ಮನೆಯ ಹೆಣ್ಣು ಮಕ್ಕಳು ಕೂಡ ಜಾಗೃತರಾಗಬೇಕಿದೆ. ಹಿಂದು, ಮುಸ್ಲಿಂ, ಕ್ರಿಶ್ಚಿಯನ್ನರು ಸೇರಿ ಎಲ್ಲ ಧರ್ಮದ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು. ಇಲ್ಲವಾದರೆ ಖುರ್ಚಿ ಖಾಲಿ ಮಾಡಿ ತೊಲಗಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದರು.
    ನಮ್ಮ ಮನೆಯ ಹೆಣ್ಣು ಮಕ್ಕಳು ಆತ್ಮರಕ್ಷಣೆಗೆ ಒತ್ತು ಕೊಡಬೇಕು. ಇಲ್ಲವಾದರೆ ಪ್ರತಿಯೊಬ್ಬರೂ ಕಿತ್ತೂರು ರಾಣಿ ಚನ್ನಮ್ಮ, ಕೆಳದಿ ರಾಣಿ ಚೆನ್ನಮ್ಮರಂತೆ ಆಗಬೇಕಿದೆ. ಈ ಜಿಹಾದಿಗಳಿಗೆ ಕುಮ್ಮಕ್ಕು ಎಲ್ಲಿಂದ ಸಿಗುತ್ತಿದೆ ಎಂಬುದನ್ನು ತನಿಖೆ ಮಾಡಬೇಕಿದೆ. ಇದು ಶ್ರೀರಾಮ ಜನಿಸಿದ, ಬದುಕಿನ ನಾಡು. ಹಿಂದುತ್ವದ ದೇಶವಿದು. ಇಸ್ಲಾಮೀಕರಣ ತಲೆಯಲ್ಲಿ ಹೊಕ್ಕಿದ್ದರೆ ಪರಿಣಾಮ ಸರಿ ಇರುವುದಿಲ್ಲ. ಪಾಕಿಸ್ತಾನದ ಮೇಲೆ ಪ್ರೀತಿ ಇದ್ದರೆ ಗಂಟುಮೂಟೆ ಕಟ್ಟಿಕೊಂಡು ಹೊರಡಬೇಕು ಎಂದು ಎಚ್ಚರಿಕೆ ನೀಡಿದರು.
    ಅಣ್ಣತಮ್ಮಂದಿರಂತೆ, ಸಹೋದರರಂತೆ ಬದುಕಿದರೆ ಇಲ್ಲಿರಿ. ಇಲ್ಲವಾದರೆ ದೇಶ ಬಿಟ್ಟು ತೊಲಗಿ ಎಂದು ಎಚ್ಚರಿಕೆ ನೀಡಿದ ಅವರು, ದೇಶದ ಕಾನೂನು ಮತ್ತು ಸಂವಿಧಾನವನ್ನು ನಂಬಿದ್ದೇವೆ. ಹಾಗಾಗಿ ನೇಹಾ ಕೊಲೆಗಾರನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಶಿವಕುಮಾರ್, ಸುಧೀಂದ್ರ, ಪ್ರದೀಪ್, ನಾಗಣ್ಣ, ನಂಜುಂಡ, ಪವನ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts