More

    ಹಿಂದು ಸಂಘಟನೆ ಕಾರ್ಯಕರ್ತ ರಸ್ತೆ ಅಪಘಾತದಲ್ಲಿ ಮೃತ್ಯು

    ಬಂಟ್ವಾಳ: ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೋಲ್ಪೋಡಿ ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬಾಳ್ತಿಲ ಗ್ರಾಮ ನಿವಾಸಿ ಯತಿರಾಜ್ ಮೃತಪಟ್ಟಿದ್ದಾರೆ. ಇವರು ಹಿಂದು ಸಂಘಟನೆಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.

    ಭಾನುವಾರ ರಾತ್ರಿ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಬೋಲ್ಪೋಡಿ ಎಂಬಲ್ಲಿ ಕಲ್ಲಡ್ಕ ಕಡೆಯಿಂದ ಓಮ್ನಿ ಕಾರು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮೋಟಾರ್ ಸೈಕಲ್ ಸವಾರ ಬಂಟ್ವಾಳ ಬಾಳ್ತಿಲ ಗ್ರಾಮದ ನಿವಾಸಿ ಯತಿರಾಜ್ ಹಾಗೂ ಓಮ್ನಿ ಕಾರು ಚಾಲಕ ಯೋಗೀಶ್ ಗಾಯಗೊಂಡಿದ್ದರು. ಈ ವೇಳೆ ವಾಹನಗಳು ಹಾಗೂ ರಸ್ತೆ ಬದಿಯ ವಿದ್ಯುತ್ ಕಂಬ ಜಖಂಗೊಂಡಿದೆ. ಯತಿರಾಜ್ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದು, ಓಮ್ನಿ ಕಾರು ಚಾಲಕ ಯೋಗೀಶ್ ಒಳರೋಗಿಯಾಗಿ ದಾಖಲುಗೊಂಡಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts