ಕುಂಭಮೇಳದಲ್ಲಿ ಹಿಂದೂ ಏಕತಾ ಪಾದಯಾತ್ರೆ; ಮೊಳಗಿದ ’ಹಿಂದೂ ರಾಷ್ಟ್ರ’ ಜಯಘೋಷ

hindu
Published on

ಪ್ರಯಾಗರಾಜ್ : ಹಿಂದು ಜನಜಾಗೃತಿ ಸಮಿತಿಯು ಕುಂಭಮೇಳದಲ್ಲಿ ‘ಹಿಂದೂ ಏಕತಾ ಪಾದಯಾತ್ರೆ’ಯನ್ನು ಆಯೋಜಿಸಿತ್ತು. ಮಹಾಕುಂಭದಿಂದ ವಿಶ್ವಕಲ್ಯಾಣಕ್ಕಾಗಿ ರಾಮರಾಜ್ಯ, ಅಂದರೆ ಹಿಂದೂ ರಾಷ್ಟ್ರದ ಸ್ಥಾಪನೆಗೆ ಒತ್ತಾಯಿಸಿ ಪಾದಯಾತ್ರೆ ನಡೆಸಲಾಯಿತು.

ಪಾದಯಾತ್ರೆಯಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಯ ಪ್ರೇರಣಾಸ್ಥಾನ ಮತ್ತು ಸನಾತನ ಸಂಸ್ಥೆಯ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆಯವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀ ಸತ್ ಶಕ್ತಿ ಬಿಂದಾ ಸಿಂಗಬಾಳ ಮತ್ತು ಶ್ರೀ ಚಿತ್ ಶಕ್ತಿ ಅಂಜಲಿ ಗಾಡಗೀಳ, ಹಾಗೂ ಹಿಂದು ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಚಾರುದತ್ತ ಪಿಂಗಳೆ, ಈಶಾನ್ಯ ಭಾರತದ ಹಿಂದೂ ಜನಜಾಗೃತಿ ಸಮಿತಿಯ ಮಾರ್ಗದರ್ಶಕರಾದ ಸದ್ಗುರು ನೀಲೇಶ ಸಿಂಗಬಾಳ ಪಾಲ್ಗೊಂಡಿದ್ದರು. ಆಧ್ಯಾತ್ಮಿಕ ಸಂಸ್ಥೆಗಳು, ಹಿಂದು ಸಂಘಟನೆಗಳ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

ಪಾದಯಾತ್ರೆಯಲ್ಲಿ ಮಾತನಾಡಿದ ಸದ್ಗುರು ಚಾರುದತ್ತ ಪಿಂಗಳೆಯವರು, ಹಿಂದು ಧರ್ಮವು ‘ವಸುಧೈವ ಕುಟುಂಬಕಂ’ ಎಂಬ ತತ್ವವನ್ನು ಆಧರಿಸಿದ್ದು, ಭಾರತವನ್ನು ಹಿಂದು ರಾಷ್ಟ್ರವೆಂದು ಘೋಷಿಸಿದರೆ ವಿಶ್ವಕಲ್ಯಾಣ ಕಾರ್ಯ ಮಾಡುವ ಹಿಂದು ಸಂಸ್ಕೃತಿಯನ್ನು ಜೀವಂತವಾಗಿಡಲು ಸಾಧ್ಯ ಎಂದರು.

ಕಾರ್ಯಕ್ರಮದಲ್ಲಿ ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಚೇತನ ರಾಜಹಂಸ, ಹಿಂದು ಜನಜಾಗೃತಿ ಸಮಿತಿಯ ಸಮನ್ವಯಕಾರ ಸುನೀಲ ಘನವಟ, ಉತ್ತರ ಪ್ರದೇಶ ಮತ್ತು ಬಿಹಾರ ಸಮನ್ವಯಕಾರ ವಿಶ್ವನಾಥ ಕುಲಕರ್ಣಿ ಮತ್ತಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net