More

    ಅಯೋಧ್ಯೆಯಲ್ಲಿ ರಾಮನ ದರ್ಶನಕ್ಕೆ ಹೋದವರು ಮುಸಲ್ಮಾನರಾಗಿ ಹೊರ ಬರುತ್ತಾರೆ: ಪಾಕ್ ಮಾಜಿ ಕ್ರಿಕೆಟಿಗ

    ನವದೆಹಲಿ: ಪಾಕಿಸ್ತಾನದ ಮಾಜಿ ನಾಯಕ ಜಾವೇದ್ ಮಿಯಾಂದಾದ್ ಅವರು ಸಂದರ್ಶನವೊಂದರಲ್ಲಿ ಅಯೋಧ್ಯೆ ರಾಮ ಮಂದಿರದ ವಿಷಯದ ಬಗ್ಗೆ ಮಾತನಾಡಿರುವ ಹಳೆಯ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿದೆ.

    ಅಯೋಧ್ಯೆಯಲ್ಲಿ ರಾಮ  ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಇನ್ನೊಂದೆಡೆ ಉದ್ಘಾಟನಾ ಸಮಾರಂಭಕ್ಕೆ ಸಕಲ ಸಿದ್ಧತೆ ನಡೆದಿದೆ. ಇತ್ತೀಚೆಗಷ್ಟೇ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಜಾವೇದ್ ಮಿಯಾಂದಾದ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಬಗ್ಗೆ ಸೆನ್ಸೇಷನಲ್ ಕಾಮೆಂಟ್ ಮಾಡಿದ್ದರು. ಮಿಯಾಂದಾದ್ ಹೇಳಿಕೆ ಇದೀಗ ಭಾರೀ ವಿವಾದ ಸೃಷ್ಟಿಸುತ್ತಿದೆ.

    ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ತೆರಳುವ ಹಿಂದೂಗಳು ಮುಸಲ್ಮಾನರಾಗಿ ಹೊರಬರುತ್ತಾರೆ ಎಂದು ಹೇಳಿದರು. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ರಾಮಮಂದಿರ ಉದ್ಘಾಟನೆಗೆ ಎರಡು ತಿಂಗಳ ಮುನ್ನವೇ ಈ ವಿಡಿಯೋ ಬೆಳಕಿಗೆ ಬಂದಿದೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮಿಯಾಂದಾದ್ ಅವರ ಈ ವೀಡಿಯೋ ಪ್ರಸ್ತುತವಲ್ಲ. ವಿಡಿಯೋ ಮೂರು ವರ್ಷಗಳ ಹಿಂದಿನದ್ದು ಎನ್ನಲಾಗಿದೆ. ಆದರೆ ಈ ಕುರಿತಾಗಿ ಖಚಿತ ಮಾಹಿತಿ ಇಲ್ಲ.

    ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮಿಯಾಂದಾದ್ ರಾಮ ಮಂದಿರದ ಬಗ್ಗೆ ಮಾತನಾಡಿ, “ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತುಂಬಾ ಒಳ್ಳೆಯ ಕೆಲಸ ಮಾಡಿದ್ದಾರೆ. ಮಸೀದಿಯನ್ನು ದೇವಸ್ಥಾನವಾಗಿ ಪರಿವರ್ತಿಸಲಾಯಿತು. ಆ ದೇವಸ್ಥಾನಕ್ಕೆ ಹೋಗುವವರೆಲ್ಲ ಮುಸಲ್ಮಾನರಾಗಿ ಹೊರಬರುತ್ತಾರೆ ಎಂದು ನಂಬಿದ್ದೇನೆ ಏಕೆಂದರೆ ನಮ್ಮ ಬೇರುಗಳು ಯಾವಾಗಲೂ ಇರುತ್ತವೆ. ನೀವು ತಪ್ಪು ಮಾಡಿದ್ದೀರಿ ಎಂದು ನನಗೆ ತುಂಬಾ ಸಂತೋಷವಾಗಿದೆ” ಎಂದು ವಿವಾದಾತ್ಮಕ ಕಾಮೆಂಟ್‌ಗಳನ್ನು ಮಾಡಲಾಗಿದೆ.

    2020 ಆಗಸ್ಟ್ 5ರಂದು ಪ್ರಧಾನಿ ಮೋದಿ ಅವರು ಅಯೋಧ್ಯೆಯಲ್ಲಿ ‘ಶ್ರೀ ರಾಮ ಜನ್ಮಭೂಮಿ ದೇವಾಲಯ’ದ ಶಂಕುಸ್ಥಾಪನೆ ಮಾಡಿದರು. ಈ ವರ್ಷಾಂತ್ಯಕ್ಕೆ ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದ್ದು, ಮುಂದಿನ ವರ್ಷ ಜನವರಿ 22ರಂದು ಮಹೋತ್ಸವ ನಡೆಯಲಿದೆ.

    ಜಾವೇದ್ ಮಿಯಾಂದಾದ್ ಯಾರು?: ಜಾವೇದ್ ಮಿಯಾಂದಾದ್ 22 ನೇ ವಯಸ್ಸಿನಲ್ಲಿ ಪಾಕಿಸ್ತಾನದ ನಾಯಕತ್ವ ವಹಿಸಿದ ಅತ್ಯಂತ ಕಿರಿಯ ಕ್ರಿಕೆಟಿಗರಲ್ಲಿ ಒಬ್ಬರು. 1992 ರಲ್ಲಿ ಪಾಕಿಸ್ತಾನ ತಂಡ ವಿಶ್ವಕಪ್ ಗೆದ್ದಾಗ ಪಾಕಿಸ್ತಾನ ಕ್ರಿಕೆಟ್ ತಂಡದ ಸದಸ್ಯರಾಗಿದ್ದರು. ಕ್ರಿಕೆಟಿಗರಾಗಿ ನಿವೃತ್ತರಾದ ನಂತರ ಮಿಯಾಂದಾದ್ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಮೂರು ಬಾರಿ ಪಾಕಿಸ್ತಾನ ರಾಷ್ಟ್ರೀಯ ತಂಡಕ್ಕೆ ತರಬೇತುದಾರರಾಗಿದ್ದರು.

    World Cup 2023: ಹೆಲಿಕಾಪ್ಟರ್​​ನಲ್ಲಿ ಪ್ರಯಾಣಿಸಿ ಪಂದ್ಯ ವೀಕ್ಷಿಸಲು ಆಹ್ವಾನ ನೀಡಿದ ಕ್ರಿಕೆಟ್ ಅಭಿಮಾನಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts