

ಹೆಬ್ರಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹಿರಿಯಡ್ಕ ಕರ್ನಾಟಕ ಪಬ್ಲಿಕ್ ಸ್ಕೂಲ್ನ 368 ವಿದ್ಯಾರ್ಥಿಗಳು ಹಾಜರಾಗಿ, 316 ಮಂದಿ ಉತ್ತೀರ್ಣರಾಗಿ ಶೇ.86 ಫಲಿತಾಂಶ ಸಾಧನೆ ಮಾಡಿದೆ. 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 197 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 60 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶ್ರಾವಿ ಶೆಟ್ಟಿ 588 ಅಂಕ ಗಳಿಸಿ ಪ್ರಥಮ ಸ್ಥಾನ, ಸಮೀಕ್ಷಾ 574 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಆಶಿಶ್ ಶೆಟ್ಟಿ 579 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಕಲಾವಿಭಾಗದಲ್ಲಿ ಬಾಲ ಗೌಡ 543 ಅಂಕದೊಂದಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.