More

    ರಾಜ್ಯದಲ್ಲಿ ಕೈ ಆಡಳಿತ ಮರುಕಳಿಸಲಿದೆ

    ಹಿರಿಯೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನ್ನೆಡೆಯಾಗಿದ್ದು, ಸೋಲು-ಗೆಲುವು ಎರಡನ್ನೂ ಸಮನಾಗಿ ಕಾರ್ಯಕರ್ತರು ಸ್ವೀಕರಿಸಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್ ವಿಶ್ವಾಸ ವ್ಯಕ್ತಪಡಿಸಿದರು.

    ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲೂಕು ಕಾರ್ಮಿಕ ಘಟಕದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಪ್ರಸಕ್ತ ಬಿಜೆಪ ಆಡಳಿತದಿಂದ ಜನ ಬೇಸತ್ತಿದ್ದು, ಕಾಂಗ್ರೆಸ್ ಅವಧಿ ಉತ್ತಮ ಆಡಳಿತ ಸ್ಮರಿಸುತ್ತಿದ್ದಾರೆ ಎಂದರು.

    ರಾಜ್ಯ ಮತ್ತು ಕೇಂದ್ರದಲ್ಲಿ ಮತ್ತೆ ಜನರ ಪ್ರೀತಿ ವಿಶ್ವಾಸ ಗಳಿಸಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಾದ ಜನಪರ ಯೋಜನೆಗಳ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸಿ, ಪಕ್ಷವನ್ನು ಬಲಗೊಳಿಸಲು ಕಾರ್ಯತಂತ್ರ ರೂಪಿಸಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪಿ.ಎಸ್.ಸಾದತ್ ಉಲ್ಲಾ ಮಾತನಾಡಿ, ದೇಶದ ರೂಪಾಯಿ ಮೌಲ್ಯ ಕುಸಿಯುತ್ತಿದೆ. ರಸಗೊಬ್ಬರ-ಗ್ಯಾಸ್ ಬೆಲೆ ಗಗನಕ್ಕೇರಿದೆ. ಬಿಜೆಪಿ ಸರ್ಕಾರ ಕುಡಿವ ನೀರು, ಕಾಫಿ, ತಿಂಡಿಗೂ ಜಿಎಸ್‌ಟಿ ಹಾಕಿ ಬಡ ಜನರನ್ನು ಶೋಷಣೆ ಮಾಡುತ್ತಿದೆ ಎಂದು ದೂರಿದರು.

    ತಾಲೂಕು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಜಿ.ದಾದಾಪೀರ್ ಮಾತನಾಡಿ, ಕೇಂದ್ರ ಸರ್ಕಾರ ಪೌರತ್ವ ಕಾಯ್ದೆ ಜಾರಿಗೆ ತಂದು ದೇಶವಾಸಿಗಳಲ್ಲಿ ಗೊಂದಲ ಮೂಡಿಸುವ ಬದಲು ನಿರುದ್ಯೋಗ, ಬಡತನ, ದೇಶದ ಆರ್ಥಿಕ ವ್ಯವಸ್ಥೆ ಬಲಪಡಿಸಲು ಚಿಂತನೆ ನಡೆಸಬೇಕು ಎಂದು ಸಲಹೆ ನೀಡಿದರು.

    ನಗರಸಭೆ ಸದಸ್ಯರಾದ ದಾದಾಪೀರ್, ಇಂತಿಯಾಜ್, ಸಮೀವುಲ್ಲಾ, ಉಪಾಧ್ಯಕ್ಷ ಶಿವಕುಮಾರ್, ಜ್ಞಾನೇಶ್ ಕುಮಾರ್, ರಫೀಕ್, ಬಾಬು, ಮಂಜುನಾಥ್, ಬುಡೇನ್ ಸಾಬ್, ಸೈಫುಲ್ಲಾ, ಪುರುಷೋತ್ತಮ್ಮ, ಜಿಲಾನ್ ಬಾಷಾ, ಮಾರುತಿ ರಾವ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts