More

  ಶಾಸಕಿ ಪೂರ್ಣಿಮಾ ನೇತೃತ್ವದಲ್ಲಿ ಜಾಗೃತಿ

  ಹಿರಿಯೂರು: ದೇಶದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ಕಾಯ್ದೆ ವಿಚಾರದಲ್ಲಿ ಜನರಲ್ಲಿರುವ ಅನುಮಾನಗಳಿಗೆ ತೆರೆ ಎಳೆಯಲು ಬಿಜೆಪಿ ಅಭಿಯಾನ ಕೈಗೊಂಡಿದೆ ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು.

  ತಾಲೂಕಿನ ಆದಿವಾಲ-ಪಟ್ರೆಹಳ್ಳಿ ಗ್ರಾಮದಲ್ಲಿ ಭಾನುವಾರ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

  ಪೌರತ್ವ ಕಾಯ್ದೆ ಬಗ್ಗೆ ಕೆಲ ರಾಜಕೀಯ ಪಕ್ಷಗಳು ತಪ್ಪು ಮಾಹಿತಿ ನೀಡಿ ಜನರನ್ನು ದಾರಿತಪ್ಪಿಸುತ್ತಿವೆ. ಈ ಕಾಯ್ದೆಯಿಂದ ಒಬ್ಬನೇ ಒಬ್ಬ ಭಾರತೀಯ ಪ್ರಜೆಗೂ ತೊಂದರೆಯಾಗುವುದಿಲ್ಲ. ಈ ವಾಸ್ತವಾಂಶವನ್ನು ಪ್ರತಿ ಪಕ್ಷಗಳು ತಿಳಿದುಕೊಳ್ಳಬೇಕು. ಕಾಂಗ್ರೆಸ್ ಮತ ಬ್ಯಾಂಕ್ ಕಳೆದುಕೊಳ್ಳುವ ಆತಂಕದಲ್ಲಿ ಗೊಂದಲ ಸೃಷ್ಟಿಸುತ್ತಿದೆ ಎಂದು ದೂರಿದರು.

  ಗ್ರಾಪಂ ಸದಸ್ಯರಾದ ಈರಣ್ಣ, ಯಲ್ಲಪ್ಪ, ಕೃಷ್ಣಮೂರ್ತಿ, ರಘು, ದಯಾನಂದ, ಕೃಷ್ಣನಾಯ್ಕ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts