More

    ಕಾರ್ಮಿಕರ ಜೀವನಕ್ಕೆ ಮನ್‌ಧನ್ ಭದ್ರತೆ

    ಹಿರಿಯೂರು: ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಪ್ರಧಾನಮಂತ್ರಿ ಶ್ರಮಯೋಗಿ ಮನ್‌ಧನ್ ಯೋಜನೆ ಪೂರಕವಾಗಿದೆ ಎಂದು ನ್ಯಾಯಾಧೀಶೆ ದಮಯಂತಿ ಸೋಮಯ್ಯ ಹೇಳಿದರು.

    ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ-ಶಿಶು ಅಭಿವೃದ್ಧಿ ಇಲಾಖೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ನಗರದ ಶನೈಶ್ಚರ ಸ್ವಾಮಿ ದೇಗುಲ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮನ್‌ಧನ್ ಯೋಜನೆ ಹಾಗೂ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    60 ವರ್ಷ ವಯಸ್ಸು ಪೂರ್ಣಗೊಂಡವರು ತಿಂಗಳಿಗೆ 3 ಸಾವಿರ ಪಿಂಚಣಿ ಪಡೆಯಲು ಅರ್ಹರಿರುತ್ತಾರೆ. 10 ವರ್ಷದೊಳಗೆ ಅವರು ಯೋಜನೆಯಿಂದ ಹೊರ ಹೋದರೆ ಪಾವತಿಸಿದ ವಂತಿಕೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುವುದು ಎಂದರು.

    ಈ ಯೋಜನೆಯಲ್ಲಿ ತೊಡಗಿಸಿಕೊಂಡ ಫಲಾನುಭವಿಯ ವಯಸ್ಸಿನ ಆಧಾರದ ಮೇಲೆ ವಂತಿಕೆ ನಿಗದಿಪಡಿಸಲಾಗಿದೆ. ಕನಿಷ್ಠ 55, ಗರಿಷ್ಠ 200 ರೂ. ಆಗಿದೆ. ಪಿಂಚಣಿ ಆರಂಭಗೊಂಡ ನಂತರ ವಂತಿಕೆದಾರರು ಮೃತಪಟ್ಟಲ್ಲಿ ಅವರ ಪತ್ನಿ ಅಥವಾ ಪತಿ ಶೇ.50ರಷ್ಟು ಪಿಂಚಣಿ ಪಡೆಯಲು ಅರ್ಹರಿರುತ್ತಾರೆ ಎಂದು ತಿಳಿಸಿದರು.

    ನ್ಯಾಯಾಧೀಶೆ ಎನ್.ಬಿ.ಶೇಖ್ ಮಾತನಾಡಿ, ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸಲು ಯುವ ಸಮೂಹ ಹೋರಾಟ ನಡೆಸುವ ಅನಿವಾರ್ಯ ಇದೆ ಎಂದರು.

    ನಗರಸಭೆ ಸದಸ್ಯ ಸಣ್ಣಪ್ಪ, ಉಪ ತಹಸೀಲ್ದಾರ್ ಪ್ರದೀಪ್, ವಕೀಲರಾದ ಶೇಷಾದ್ರಿ, ದೃವಕುಮಾರ್, ಮಹಾಲಿಂಗಪ್ಪ, ಶಾಂತಕುಮಾರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts