More

    ಧರ್ಮಪುರ ಹೋಬಳಿ ಅಭಿವೃದ್ಧಿಗೆ ಆದ್ಯತೆ

    ಹಿರಿಯೂರು: ಧರ್ಮಪುರ ಹೋಬಳಿ ಸೇರಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಶಾಸಕಿ ಕೆ.ಪೂರ್ಣಿಮಾ ಹೇಳಿದರು.

    ತಾಲೂಕಿನ ಧರ್ಮಪುರ ಹೋಬಳಿ ವ್ಯಾಪ್ತಿಯ ವಿವಿಧೆಡೆ 80 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬುಧವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

    ಹೋಬಳಿ ಜನರ ಬೇಡಿಕೆಯಾದ ಧರ್ಮಪುರ ಕೆರೆಗೆ ಶಾಶ್ವತ ನೀರಾವರಿ ಸೌಲಭ್ಯ, ಪ್ರತಿ ಗ್ರಾಮಕ್ಕೂ ಶುದ್ಧ ಕುಡಿವ ನೀರು ಪೂರೈಕೆ, ಆರೋಗ್ಯ, ಶಿಕ್ಷಣ, ರಸ್ತೆ, ವಿದ್ಯುತ್ ಇತರ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದರು.

    ಜಿಪಂ ಅಧ್ಯಕ್ಷೆ ಶಶಿಕಲಾ ಮಾತನಾಡಿ, ಜಿಪಂ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

    ಜಿಪಂ ಸದಸ್ಯೆ ತ್ರಿವೇಣಿ ಶಿವಪ್ರಸಾದ್ ಗೌಡ, ಗ್ರಾಪಂ ಅಧ್ಯಕ್ಷರಾದ ಇಂದ್ರಮ್ಮ, ಸುನೀತಾ ಮಂಜುನಾಥ್, ಬಿಜೆಪಿ ಮುಖಂಡರಾದ ನಾಗರಾಜ್ ರಾವ್, ಶ್ರವಣಗೆರೆ ಎಂ.ಶಿವಣ್ಣ, ಬೆನಕನಹಳ್ಳಿ ಶಿವಮೂರ್ತಿ, ರವಿಶಂಕರ್, ಮುರಳಿ, ಮಂಜುನಾಥ್, ಯಲ್ಲಪ್ಪ, ಮೋಹನ್, ದಿಲೀಪ್, ಹನುಮಂತರಾಯ ಇತರರಿದ್ದರು.

    ಹಿರಿಯೂರು ತಾಲೂಕಿನಲ್ಲಿ ಎರಡು ಜಲಾಶಯವಿದ್ದರು ಧರ್ಮಪುರ ಕೆರೆಗೆ ನೀರು ತುಂಬಿಸಲು ಸಾಧ್ಯವಾಗಿಲ್ಲ. ಶಾಸಕಿ ಪೂರ್ಣಿಮಾ ಅವರು ಇಚ್ಛಾಶಕ್ತಿ ಪ್ರದರ್ಶಿಸಿ ಧರ್ಮಪುರ ಕೆರೆಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಲಿದ್ದಾರೆ ಎಂಬ ಭರವಸೆಯಲ್ಲಿ ಜನರಿದ್ದಾರೆ.
    ರವಿಶಂಕರ್ ಶ್ರವಣಗೆರೆ
    ಬಿಜೆಪಿ ಯುವ ಮುಖಂಡ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts