ಹಳ್ಳಿ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

ಹಿರಿಯೂರು: ತಾಲೂಕಿನ ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು.

ತಾಲೂಕಿನ ಮಾರೇನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಸಿ, ಒಂದು ವರ್ಷದಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಲಾಗಿದೆ. ಕ್ಷೇತ್ರದಲ್ಲಿ ಕುಡಿವ ನೀರು, ರಸ್ತೆ, ಶಿಕ್ಷಣ, ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಮುಂದಿನ ದಿನದಲ್ಲಿ ಬಿಜೆಪಿ ಸರ್ಕಾರ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿದರೆ ತಾಲೂಕಿನ ಜನರ ಬಹುದಿನದ ಕನಸಾದ ಹೈಟೆಕ್ ಆಸ್ಪತ್ರೆ, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಜಿಪಂ ಸದಸ್ಯೆ ರಾಜೇಶ್ವರಿ, ತಾಪಂ ಸದಸ್ಯರಾದ ಯಶವಂತ್, ಜಯರಾಮಯ್ಯ, ಬಿಜೆಪಿ ತಾಲೂಕಾಧ್ಯಕ್ಷ ದ್ಯಾಮಣ್ಣ, ನಿರಂಜನಮೂರ್ತಿ ಇತರರಿದ್ದರು.

Leave a Reply

Your email address will not be published. Required fields are marked *