More

    ಅಚ್ಚುಕಟ್ಟು ಪ್ರದೇಶಕ್ಕೆ ಹರಿಯಲಿದೆ ನೀರು

    ಖಂಡೇನಹಳ್ಳಿ ಬಸವರಾಜ್ ಹಿರಿಯೂರು: ತಾಲೂಕಿನ ವಾಣಿ ವಿಲಾಸ ಸಾಗರದ ಅಚ್ಚುಕಟ್ಟು ಪ್ರದೇಶಕ್ಕೆ ಇಂದಿನಿಂದ ಮೂವತ್ತು ದಿನಗಳ ಕಾಲ ನೀರು ಹರಿಯಲಿದ್ದು, ರೈತರ ಮೊಗದಲ್ಲಿ ಸಂತಸ ಅರಳಿದೆ.

    ನೀರು ಹರಿಸುವಂತೆ ಆಗ್ರಹಿಸಿ ಒಂದು ತಿಂಗಳಿಂದ ಹೋರಾಟ ನಡೆಸಿದ್ದ ಅನ್ನದಾತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮಳೆ ಕೊರತೆ, ಅಂತರ್ಜಲ ಕುಸಿತ, ನಾಲೆಗಳಿಗೆ ನೀರಿಲ್ಲದೆ ವೇದಾವತಿ ನದಿ ಪಾತ್ರದಲ್ಲಿನ ತೋಟಗಾರಿಕೆ ಬೆಳೆಗಳು ಒಣಗಿದ್ದು, ಜನ-ಜಾನುವಾರುಗಳು ಹನಿ ನೀರಿಗೂ ಪರಿತಪಿಸುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು.

    ಗಂಗಾ ಪೂಜೆ: ಡೆಡ್ ಸ್ಟೋರೇಜ್ ತಲುಪಿದ್ದ ಜಲಾಶಯದ ನೀರಿನ ಮಟ್ಟ ದಶಕದ ನಂತರ ನೂರು ಅಡಿ ತಲುಪಿದೆ. ಈ ಬಾರಿ ವರುಣ ಕೃಪೆ, ಭದ್ರಾ ನೀರು ಹರಿಸಿದ್ದರಿಂದ ಜಲಾಶಯದಲ್ಲಿ ಹೆಚ್ಚು ನೀರು ಸಂಗ್ರಹವಾಗಿದೆ. ಶುಕ್ರವಾರ ಜಲಾಶಯದ ಬಳಿ ಹೋಮ-ಹವನ, ಗಂಗಾ ಪೂಜೆ, ಬಾಗಿನ ಅರ್ಪಿಸುವ ಕಾರ್ಯಕ್ರಮ, ಮಠಾಧೀಶರು-ಭದ್ರಾ ಮೇಲ್ದಂಡೆ ಯೋಜನೆ ಹೋರಾಟಗಾರರನ್ನು ಸನ್ಮಾನಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ. ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಸಚಿವ ಶ್ರೀರಾಮುಲು, ಸಂಸದ ಎ.ನಾರಾಯಣಸ್ವಾಮಿ, ಶಾಸಕಿ ಕೆ.ಪೂರ್ಣಿಮಾ ಭಾಗವಹಿಸಲಿದ್ದಾರೆ.

    ನೀರಿಗಾಗಿ ಅಹೋರಾತ್ರಿ ಧರಣಿ: ವಿವಿ ಸಾಗರ ಎಡ-ಬಲ ದಂಡೆ ನಾಲೆಗಳಿಗೆ ನೀರು ಹರಿಸುವಂತೆ ರೈತ ಸಂಘದ ನೇತೃತ್ವದಲ್ಲಿ ತಾಲೂಕಿನ ಕಚೇರಿ ಬಳಿ ಅಹೋರಾತ್ರಿ ಧರಣಿ ನಡೆಸಲಾಗಿತ್ತು. ಶಾಸಕಿ ಕೆ.ಪೂರ್ಣಿಮಾ ರೈತರ ಮನವೊಲಿಸಿ, ಜಿಲ್ಲಾಧಿಕಾರಿ ಜತೆ ಚರ್ಚಿಸಿ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಮನವಿ ಮಾಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts