More

  ಮತದಾನ ಪವಿತ್ರ ಕರ್ತವ್ಯ

  ಹಿರಿಯೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪಾರದರ್ಶಕ ಆಡಳಿತಕ್ಕಾಗಿ ಪ್ರತಿಯೊಬ್ಬರು ಮತದಾನ ಮಾಡಬೇಕು ಎಂದು ಪ್ರಾಂಶುಪಾಲ ಬಿ.ಪಿ.ತಿಪ್ಪೇಸ್ವಾಮಿ ಹೇಳಿದರು.

  ನಗರದಲ್ಲಿ ಅಂಬೇಡ್ಕರ್ ಪದವಿ ಪೂರ್ವ ಕಾಲೇಜು ಹಾಗೂ ಗೌತಮ್ ಅಕಾಡೆಮಿ ಶಾಲೆಯಿಂದ ಶನಿವಾರ ಹಮ್ಮಿಕೊಂಡಿದ್ದ ಮತದಾರರ ದಿನಾಚರಣೆ ವೇಳೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

  ಮತದಾರರು ಆಸೆ-ಆಮಿಷಗಳಿಗೆ ಬಲಿಯಾಗದೆ ಸೂಕ್ತ ಅಭ್ಯರ್ಥಿಗೆ ಮತ ನೀಡಿ ಮತದಾನದ ಮೌಲ್ಯ ಕಾಪಾಡಬೇಕು. ಆಗ ಮಾತ್ರ ಮತದಾರರ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು.

  ಉಪನ್ಯಾಸಕರಾದ ಕೆ.ರಂಗಪ್ಪ, ಎಚ್.ಆರ್.ಲೋಕೇಶ್, ಎಲ್.ಶಾಂತಕುಮಾರ್, ಈ.ನಾಗೇಂದ್ರಪ್ಪ, ರಜಾಕ್ ಸಾಬ್, ಮಂಜು, ಮುಖ್ಯಶಿಕ್ಷಕಿ ವೈಶಾಲಿ, ತ್ರಿವೇಣಿ, ಮೇಘನಾ, ಜಯಶೀಲಾ, ಪ್ರಿಯಾಂಕ, ಅಂಬುಜಾ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts