More

  ವಿವಿ ಸಾಗರ ನಾಲೆ ಅಭಿವೃದ್ಧಿಗೆ ಕ್ರಮ

  ಹಿರಿಯೂರು: ವಾಣಿವಿಲಾಸ ಸಾಗರ ಜಲಾಶಯದ ಎಡ ಮತ್ತು ಬಲ ದಂಡೆ ನಾಲೆಗಳ ಅಭಿವೃದ್ಧಿಗೆ 280 ಕೋಟಿ ರೂ. ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹಿರಿಯೂರು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ ಹೇಳಿದರು.

  ತಾಲೂಕಿನ ಪಟ್ರೇಹಳ್ಳಿ ವೇದಾವತಿ ನದಿ ಪಾತ್ರದಲ್ಲಿ 88 ಲಕ್ಷ ರೂ. ವೆಚ್ಚದ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

  ತಾಲೂಕಿನ ಜೀವನಾಡಿ ವಿವಿ ಸಾಗರಕ್ಕೆ ಎತ್ತಿನಹೊಳೆ ನೀರು ಹರಿಸುವ ಸಾಧ್ಯತೆ ಇದೆ. ಭದ್ರಾ ಮತ್ತು ಎತ್ತಿನಹೊಳೆ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ತಾಲೂಕಿನ ಕೃಷಿ ಕ್ಷೇತ್ರದ ಪುನಶ್ಚೇತನಕ್ಕೆ ವಿಶೇಷ ಯೋಜನೆ ರೂಪಿಸಲಾಗಿದೆ. ಜಲಮೂಲಗಳ ಸಂರಕ್ಷಣೆ, ಕೆರೆ-ಕಟ್ಟೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ, ಜನ-ಜಾನುವಾರುಗಳ ಕುಡಿವ ನೀರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

  ನೀರಾವರಿ ಸಚಿವರ ಭೇಟಿ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿ ಪರಿಶೀಲನೆಗೆ ಶೀಘ್ರವೇ ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಭೇಟಿ ನೀಡಲಿದ್ದಾರೆ. ಈ ವೇಳೆ ತಾಲೂಕಿನಲ್ಲಿ ನನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿ ಅನುಮೋದನೆ ಪಡೆಯಲಾಗುವುದು ಎಂದು ಹೇಳಿದರು.

  ಬಿಜೆಪಿ ಮುಖಂಡ ಡಿ.ಟಿ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಸದಸ್ಯೆ ರಾಜೇಶ್ವರಿ, ತಾಲೂಕು ಪಂಚಾಯಿತಿ ಸದಸ್ಯ ಜಯರಾಮಯ್ಯ, ಚಿತ್ತಪ್ಪ, ರಾಮಣ್ಣ, ಶಾಸಕರ ಆಪ್ತ ಸಹಾಯಕ ನಿರಂಜನ್ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts