More

    ನವ ಹಿರಿಯೂರು ನಿರ್ಮಾಣದ ಗುರಿ ಎಂದ ಶಾಸಕಿ ಪೂರ್ಣಿಮಾ

    ಹಿರಿಯೂರು: ರಾಜ್ಯ ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ನವ ಹಿರಿಯೂರು ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು.

    ನಗರದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶನಿವಾರ ಶಿಕ್ಷಣ ಇಲಾಖೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

    ಕಳೆದ ಮೂರು ವರ್ಷ ನೀರಾವರಿ, ಕೃಷಿ, ಕುಡಿವ ನೀರು, ವಸತಿ ಯೋಜನೆ ಹಾಗೂ ಜ್ವಲಂತ ಸಮಸ್ಯೆಗಳನ್ನು ಶಾಶ್ವತವಾಗಿ ಪರಿಹರಿಸಲು ಮೊದಲ ಆದ್ಯತೆ ನೀಡಿದ್ದು, ತಾಲೂಕನ್ನು ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

    ಜನವರಿ ತಿಂಗಳಲ್ಲಿ ಸಿಎಂ ಭೇಟಿ

    ವಿ.ವಿ.ಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ, 25 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನವರಿ ತಿಂಗಳಲ್ಲಿ ಹಿರಿಯೂರಿಗೆ ಭೇಟಿ ನೀಡಲಿದ್ದಾರೆ ಎಂದು ಪೂರ್ಣಿಮಾ ತಿಳಿಸಿದರು.

    ಡಿಡಿಪಿಐ ರವಿಶಂಕರ್ ರೆಡ್ಡಿ, ನಗರಸಭೆ ಅಧ್ಯಕ್ಷೆ ಶಂಶುನ್ನೀಸಾ, ಉಪಾಧ್ಯಕ್ಷ ಪ್ರಕಾಶ್, ಮಾಜಿ ಅಧ್ಯಕ್ಷ ಟಿ.ಚಂದ್ರಶೇಖರ್, ಸದಸ್ಯರಾದ ಸಣ್ಣಪ್ಪ, ಮಹೇಶ್ ಪಲ್ಲವ, ಅಪೂರ್ವಾ, ಬಾಲಕೃಷ್ಣ, ಶರವಣ, ರಾಜಣ್ಣ, ಕೇಶವಮೂರ್ತಿ, ಮಂಜುಳಾ, ರವಿ, ಬಿಇಒ ನಾಗಭೂಷಣ್, ಶಶಿಧರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts