More

    ರೈತರಿಂದ ಹಣ್ಣು ಖರೀದಿ

    ಹಿರಿಯೂರು: ಲಾಕ್‌ಡೌನ್ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ತೋಟಗಾರಿಕೆ ಅಧಿಕಾರಿಗಳು ಧಾವಿಸಿರುವುದು ಕೃಷಿಕರಲ್ಲಿ ಸಂತಸ ಮೂಡಿಸಿದೆ.

    ತಾಲೂಕಿನ ಬಹುತೇಕ ರೈತರು ತೋಟಗಾರಿಕೆ ಬೆಳೆಗಳಾದ ಪಪ್ಪಾಯ, ದಾಳಿಂಬೆ, ಬಾಳೆ, ಕುಂಬಳ, ಕಲ್ಲಂಗಡಿ, ಕರಬೂಜ ಇತರ ಬೆಳೆ ಬೆಳೆದಿದ್ದು, ಲಾಕ್‌ಡೌನ್‌ನಿಂದ ಮಾರಾಟ ಮಾಡಲು ಸಾಧ್ಯವಾಗದೇ ಸಂಕಷ್ಟದಲ್ಲಿದ್ದರು.

    ಈ ಸಮಯದಲ್ಲಿ ಸರ್ಕಾರದ ನಿರ್ದೇಶನದಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ನೇರ ಖರೀದಿದಾರರನ್ನು ರೈತರ ಜಮೀನಿಗೆ ಕರೆತಂದು ಉತ್ತಮ ಬೆಲೆಗೆ ಹಣ್ಣುಗಳನ್ನು ಖರೀದಿಸಿ ಅನುಕೂಲ ಮಾಡಿಕೊಟ್ಟಿದ್ದಕ್ಕೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts