More

    ವಿದ್ಯಾರ್ಥಿಗಳು ಸಂಸ್ಕಾರ ಬೆಳೆಸಿಕೊಳ್ಳಬೇಕು

    ಹಿರಿಯೂರು: ವಿದ್ಯಾರ್ಥಿಗಳು ವಿದ್ಯೆ ಕಲಿತ ಶಾಲೆ ಹಾಗೂ ಅಕ್ಷರ ಜ್ಞಾನ ಕಲಿಸಿದ ಗುರುಗಳನ್ನು ಗೌರವಿಸುವ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಶಾಸಕಿ ಕೆ.ಪೂರ್ಣಿಮಾ ಕಿವಿಮಾತು ಹೇಳಿದರು.

    ತಾಲೂಕಿನ ಧರ್ಮಪುರ ಸ್ವಾಭಿಮಾನ ವಿದ್ಯಾಸಂಸ್ಥೆಯಲ್ಲಿ ಬುಧವಾರ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ವಿದ್ಯಾರ್ಥಿಗಳು ಶಿಕ್ಷಕರನ್ನು ಕೇವಲ ಕಲಿಕೆ ದೃಷ್ಟಿಯಿಂದ ನೋಡಬಾರದು. ಅವರೊಂದಿಗೆ ಪ್ರೀತಿ, ಬಾಂಧವ್ಯ ತೋರಬೇಕು. ಆಗಲೇ ಗುರು-ಶಿಷ್ಯರ ಸಂಬಂಧಕ್ಕೆ ಅರ್ಥ ಬರುವುದು. ಗುಣಮಟ್ಟದ ಶಿಕ್ಷಣದ ಜತೆಗೆ ಸಂಸ್ಕಾರ, ದೇಶಾಭಿಮಾನ, ಮಾನವೀಯ ಮೌಲ್ಯ ಬೆಳೆಸಿಕೊಂಡಾಗ ಮಾತ್ರ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು ಎಂದರು.

    ಸಂಸ್ಥೆ ಅಧ್ಯಕ್ಷ ಆರ್.ಚಂದ್ರಯ್ಯ, ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ, ಸಮಾಜ ಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಇ.ವೆಂಕಟಯ್ಯ, ಜಿಪಂ ಸದಸ್ಯೆ ತ್ರಿವೇಣಿ, ತಾಪಂ ಸದಸ್ಯೆ ವನಜಾಕ್ಷಿ, ಗ್ರಾಪಂ ಅಧ್ಯಕ್ಷೆ ಇಂದ್ರಮ್ಮ, ಬಿಇಒ ರಾಮಯ್ಯ, ಪಿಎಸ್‌ಐ ಚಂದ್ರಶೇಖರ್, ಚಂದ್ರು, ಶಿವಣ್ಣ, ಪ್ರಾಚಾರ್ಯ ರಂಗಸ್ವಾಮಿ, ಮುಖ್ಯ ಶಿಕ್ಷಕ ಮಹಂತೇಶ್ ಇತರರಿದ್ದರು.

    ಶಾಲಾ ವಾರ್ಷಿಕೋತ್ಸವ ನಿಮಿತ್ತ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೆಎಎಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಖಜಾನೆ ಅಧಿಕಾರಿಯಾಗಿ ಆಯ್ಕೆಯಾಗಿರುವ ವಿನೋದಮ್ಮ ಅವರನ್ನು ಗೌರವಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts