ಹೊಸ ಸಂಸತ್​ ಭವನದಲ್ಲಿ ಪ್ರಧಾನಿಯಿಂದ ರಾಜದಂಡ ಸೆಂಗೋಲ್​ ಸ್ಥಾಪನೆ: ತಮಿಳಿನ ಸೆಂಗೋಲ್ ಹಿನ್ನೆಲೆ ಇಲ್ಲಿದೆ…

ನವದೆಹಲಿ: ಇದೇ ಭಾನುವಾರ ಅಂದರೆ ಮೇ 28ರಂದು ಹೊಸ ಸಂಸತ್​ ಭವನ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಳ್ಳಲಿದೆ. ಅದೇ ದಿನ ಮೋದಿ ಅವರು ಐತಿಹಾಸಿಕ ಚಿನ್ನದ ರಾಜದಂಡವನ್ನು ಲೋಕಸಭಾಧ್ಯಕ್ಷರ ಸೀಟಿನ ಹಿಂಭಾಗದಲ್ಲಿ ಸ್ಥಾಪಿಸಲಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್​ ಷಾ ಅವರು ಇಂದು ತಿಳಿಸಿದರು. ಬ್ರಿಟಿಷರಿಂದ ಭಾರತೀಯರಿಗೆ ಅಧಿಕಾರ ಹಸ್ತಾಂತರವಾಗಿದ್ದನ್ನು ಗುರುತಿಸಲು ಈ ರಾಜದಂಡವನ್ನು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಹಸ್ತಾಂತರಿಸಲಾಯಿತು ಎಂದು ಅಮಿತ್​ ಷಾ ಹೇಳಿದರು. ಈ ರಾಜದಂಡವನ್ನು ಸೆಂಗೋಲ್​ ಎಂದು ಕರೆಯಲಾಗುತ್ತದೆ. … Continue reading ಹೊಸ ಸಂಸತ್​ ಭವನದಲ್ಲಿ ಪ್ರಧಾನಿಯಿಂದ ರಾಜದಂಡ ಸೆಂಗೋಲ್​ ಸ್ಥಾಪನೆ: ತಮಿಳಿನ ಸೆಂಗೋಲ್ ಹಿನ್ನೆಲೆ ಇಲ್ಲಿದೆ…