

ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಜಿ-20 ಶೃಂಗಸಭೆಯಲ್ಲಿ ನ್ಯೂ ಡೆಲ್ಲಿ ಡಿಕ್ಲರೇಷನ್ ಅಂಗೀಕರಿಸುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನಮಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ನಮ್ಮ ತಂಡದ ಕಠಿಣ ಪರಿಶ್ರಮದಿಂದಾಗಿ ನ್ಯೂ ಡೆಲ್ಲಿ ಡಿಕ್ಲರೇಷನ್ ಅಂಗೀಕಾರವಾಗಿದೆ. ಪ್ರತ್ಯೇಕವಾಗಿ ಹಾಗೂ ಪರೋಕ್ಷವಾಗಿ ಇದಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಪ್ರಧಾನಿ ಮೋದಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಅವರು, ದಿ ಡೆಲ್ಲಿ ಡಿಕ್ಲರೇಷನ್ ಅಳವಡಿಕೆಯೊಂದಿಗೆ ಇತಿಹಾಸವನ್ನು ಸೃಷ್ಟಿಸಲಾಗಿದೆ. ಒಮ್ಮತ ಮತ್ತು ಸಾಮರಸ್ಯದ ಭವಿಷ್ಯಕ್ಕಾಗಿ ಕೆಲಸ ಮಾಡುವುದಾಗಿ ನಾವೆಲ್ಲರೂ ಪ್ರತಿಜ್ಞೆ ಂಆಡುತ್ತೇವೆ. ಇದಕ್ಕೆ ಸಹಕರಿಸಿದ ಎಲ್ಲಾ ಜಿ-20 ನಾಯಕರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ರಷ್ಯಾ- ಉಕ್ರೇನ್ ನಡುವಿನ ಯುದ್ಧದ ಕುರಿತಾದ ಸವಾಲುಗಳ ನಡುವೆ, ಹೊಸದಿಲ್ಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಜಿ20 ನಾಯಕರು ದೇಶಗಳ ಜಂಟಿ ಘೋಷಣೆಯನ್ನು ನ್ಯೂ ಡೆಲ್ಲಿ ಡಿಕ್ಲರೇಷನ್ಅನ್ನು ಶನಿವಾರ ಅಂಗೀಕರಿಸಿದ್ದಾರೆ.