ಪಿರಿಯಾಪಟ್ಟಣ: ತಾಲೂಕಿನ ಹಿಟ್ನೆಹೆಬ್ಬಾಗಿಲು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಎಚ್.ಜಿ.ರವಿಕುಮಾರ್ ಹಾಗೂ ವನಜಾಕ್ಷಮ್ಮ ಅವಿರೋಧವಾಗಿ ಆಯ್ಕೆಯಾದರು.
ಆಂತರಿಕ ಒಪ್ಪಂದದಂತೆ ಈ ಹಿಂದಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಸೋಮವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಜಿ.ರವಿಕುಮಾರ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ವನಜಾಕ್ಷಮ್ಮ ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಪಶು ವೈದ್ಯಕೀಯ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ ಅವರು ಅವಿರೋಧ ಆಯ್ಕೆಯನ್ನು ಘೋಷಿಸಿದರು. ಫಲಿತಾಂಶದ ಬಳಿಕ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.
ನೂತನ ಅಧ್ಯಕ್ಷ ಎಚ್.ಜಿ.ರವಿಕುಮಾರ್ ಮಾತನಾಡಿ, ಅಧಿಕಾರದ ಅವಧಿಯಲ್ಲಿ ಪಂಚಾಯಿತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಪಕ್ಷಾತೀತವಾಗಿ ಒತ್ತು ನೀಡುವುದಾಗಿ ತಿಳಿಸಿದರು.
ಕೆಪಿಸಿಸಿ ಸದಸ್ಯ ಅನಿಲ್ ಕುಮಾರ್, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಚ್.ಜಿ.ಪರಮೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಕಾಮರಾಜ್, ಸೀಗೂರು ವಿಜಯಕುಮಾರ್, ಎಂ.ಎಸ್.ಮೀನಾಕ್ಷಿ, ವರನಂದಿ, ಸುಧಾ, ಮಹದೇವ, ಕುಮಾರ, ಯಶೋದಮ್ಮ, ಮಹದೇವ, ಶಿವಕುಮಾರ್, ಸರೋಜಾ, ಛಾಯಾಮಣಿ, ಸಾಕಮ್ಮ, ಮಂಜುನಾಯಕ, ಪಿಡಿಒ ನಾಗೇಂದ್ರ ಕುಮಾರ್, ಮುಖಂಡರಾದ ಹಿಟ್ನಹಳ್ಳಿ ಶಿವಶಂಕರ್, ಕಗ್ಗುಂಡಿ ಹರೀಶ್, ವಿನೋದ್ ಕುಮಾರ್, ಶಿವರುದ್ರ, ಇ.ಪಿ.ಲೋಕೇಶ್, ಪುಟ್ಟರಾಜು, ಇ.ಪಿ.ದಿನೇಶ್ ಇತರರು ಇದ್ದರು.