More

  ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

  ಗದಗ:  ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಮಂಗಳವಾರ ಸಾಯಂಕಾಲ ನಗರದ ಕಾಟನ ಸೇಲ್‌ ಸೊಸೈಯಟಿಲ್ಲಿ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

  ಸಾರ್ವಜನಿಕರಿಂದ ಶಾಂತ‌ ಚಿತ್ತದಿಂದಲೇ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಕೂಡಲೆ ಸಮಸ್ಯೆ ಪರಿಹಾರಕ್ಕಾಗಿ ಕ್ರಮ‌ಕೈಗೊಳ್ಳುವಂತೆ ಸೂಚನೇ ನೀಡಿದರು.

  ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಅನುದಾನ, ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಮನವಿ ಸೇರಿದಂತೆ ಸಾರ್ವಜನಿಕರಿಂದ ಸಾಮೂಹಿಕ ಹಾಗೂ ವಯಕ್ತಿಕ ಅಹವಾಲುಗಳನ್ನು ಸ್ವೀಕರಿಸಿ ಸಂಭಂದಿಸಿದ ಇಲಾಖೆ ಅಧಿಕಾರಿಗಳಿಗೆ ತಕ್ಷಣ ಪರಿಹಾರ ಮಾಡುವಂತೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ.ಪಾಟೀಲ ಅವರು ಸೂಚಿಸಿದರು.

  ಸಾರ್ವಜನಿಕರು ಅನಾಯೊಗ್ಯ ಕಾರಣ ಶಸ್ತ್ರಚಿಕಿತ್ಸೆ ಸಹಾಯ ಕೋರಿ ಅಹವಾಲು ತೋಡಿಕೋಂಡರು. ಇದಕ್ಕೆ ಸ್ಪಂದಿಸಿದಂತೆ ಸಚಿವರಾದ ಎಚ್ ಕೆ ಪಾಟೀಲ ಅವರು ಪರಿಹಾರ ನೀಡುವ ಕುರಿತು ಬರವಸೆ ನೀಡಿದರು.

  ಸಾರ್ವಜನಿಕ ಕುಂದು ಕೊರತೆಗಳ ವಿಚಾರಣೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಬಿ.ಬಿ.ಅಸೂಟಿ, ಅಶೋಕ ಮಂದಾಲಿ, ಪ್ರಭು ಬುರಬುರೆ, ಕೃಷ್ಣಾ ಪರಾಪುರೆ ಉಪಸ್ಥಿತರಿದ್ದರು.

  ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ತಹಶಿಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ.ಕಂಬಾಳಿಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಬಿಸಿಎಂ ಜಿಲ್ಲಾ ಅಧಿಕಾರಿ ರವಿ ಗುಂಜಿಕರ, ಡಿಎಸ್ಒ ಡಾ. ವೆಂಕಟೇಶ ರಾಠೋಡ, ಡಿಡಿಪಿಐ ಎಂ.ಎ.ರಡ್ಡೇರ, ಆಹಾರ ಇಲಾಖೆ ಉಪನಿರ್ದೇಶಕ ಎಂ. ಗಂಗಪ್ಪ, ಆರ್.ಟಿ.ಒ ಮಂಜುನಾಥ ಶೀರಾಳೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜಿನಿಕರು‌, ಗಣ್ಯರು ಹಾಜರಿದ್ದರು.

  See also  ರಾಜ್ಯಮಟ್ಟದ ಯುವಜನ ಮೇಳ ಫೆ.14 ರಿಂದ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts