More

    ಬಿಎಸ್​ವೈ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆ ಮಾನಸಿಕ ಅಸ್ವಸ್ಥೆ: ಗೃಹಸಚಿವ ಪರಮೇಶ್ವರ್

    ಬೆಂಗಳೂರು: ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಹೇಳಿದ್ದಾರೆ.

    ನಗರದಲ್ಲಿ ಈ ಕುರಿತು ಪ್ರತಿಕ್ರಿಯಸಿದ ಪರಮೇಶ್ವರ್, ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ ಎಂದು ತಿಳಿಸಿದ್ದಾರೆ.

    ಮಾಜಿ ಸಿಎಂ ಯಡಿಯೂರಪ್ಪನವರ ವಿರುದ್ಧ ಬುಧವಾರ ರಾತ್ರಿ ಮಹಿಳೆ ಕೈಬರಹದ ಬದಲಾಗಿ ಟೈಪ್ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಇಂದಿನಿಂದ ತನಿಖೆ ನಡೆಸುತ್ತಾರೆ. ಇದೊಂದು ಸೂಕ್ಷ್ಮ ವಿಚಾರವಾಗಿರುವುದರಿಂದ ಗೃಹ ಇಲಾಖೆ ಸಂಪೂರ್ಣ ಮಾಹಿತಿ ತೆಗೆದುಕೊಂಡು ತನಿಖೆ ಮಾಡುತ್ತೇವೆ. ತನಿಖೆ ಆಗುವವರೆಗೆ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದಿದ್ದಾರೆ.

    ಇದನ್ನೂ ಓದಿ: ಪಾಕಿಸ್ತಾನ ಪರ ಬೇಹುಗಾರಿಕೆ; ಯುವಕ ಅರೆಸ್ಟ್​

    ದೂರು ನೀಡಿರುವ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು, ತನಿಖೆಯ ನಂತರವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ. ಇದೊಂದು ಸೂಕ್ಷ್ಮ ವಿಚಾರ. ಇದು ಹಿರಿಯ ರಾಜಕಾರಣಿಯಾಗಿರುವ ಮಾಜಿ ಸಿಎಂಗೆ ಸಂಬಂಧಿಸಿದ್ದು. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ, ತನಿಖೆ ಪೂರ್ಣಗೊಳ್ಳುವವರೆಗೆ, ಎಚ್ಚರಿಕೆಯಿಂದ ಮಾತನಾಡಬೇಕಾಗುತ್ತದೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಯವರಿಗಾಗಲಿ, ಉಪ ಮುಖ್ಯಮಂತ್ರಿಯವರಿಗಾಗಲಿ, ನನಗಾಗಲೀ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಪೊಲೀಸರು ಕಾನೂನಿನ ಪ್ರಕಾರ ತನಿಖೆ ನಡೆಸಿ, ಕ್ರಮ ಜರುಗಿಸುತ್ತಾರೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್​ ತಿಳಿಸಿದ್ದಾರೆ.

    ಪ್ರಕರಣದ ಹಿನ್ನೆಲೆ

    ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯಯಾಚಿಸಲು ತೆರಳಿದ್ದಾಗ ಘಟನೆ ನಡೆದಿದೆ. 9 ನಿಮಿಷಗಳ ಕಾಲ ಮೊದಲು ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ. ಅನಂತರ ಅಪ್ರಾಪ್ತೆಯನ್ನು ರೂಂ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಅಪ್ರಾಪ್ತೆಯ ಖಾಸಗಿ ಭಾಗ ಮುಟ್ಟಿರುವ ಬಗ್ಗೆ ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ರೂಂನಿಂದ ಹೊರ ಬಂದು ಯಡಿಯೂರಪ್ಪ ಅವರು ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ವಿಚಾರವನ್ನ ಯಾರಿಗೂ ಹೇಳಬಾರದೆಂದು ಹೆದರಿಸಿ ನಮ್ಮನ್ನ ತಡೆದಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.

    ಇನ್ನು ದೂರುದಾರ ಮಹಿಳೆ ಕಳೆದ 2015 ರಿಂದಲೂ ಈವರೆಗೂ 53 ಕೇಸ್ ದಾಖಲಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ದವು ದೂರು ನೀಡಿದ್ದಾರೆ. ರಾಜಕಾರಣಿಗಳ ವಿರುದ್ದ ಕೂಡ ಈ ಹಿಂದೆ ಮಹಿಳೆ ದೂರು ನೀಡಿದ್ದಾರೆ. ಗಂಡನ ಹಾಗು ಮಗನ ವಿರುದ್ದ , ರೌಡಿಶೀಟರ್ ಗಳ ಮೇಲೆ ದೂರು ದಾಖಲಿಸಿದ್ದಾರೆ. 2015 ರಲ್ಲಿ ಮಗಳ ವಿರುದ್ದ ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಗಂಡನ ಸಂಬಂಧಿಯೊಬ್ಬನ ವಿರುದ್ದ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts