Wednesday, 12th December 2018  

Vijayavani

Breaking News

ಸಿದ್ದರಾಮಯ್ಯ ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚಿ ರಾಜಕೀಯ ಮಾಡುತ್ತಿದ್ದಾರೆ: ಶೆಟ್ಟರ್​

Monday, 19.03.2018, 5:39 PM       No Comments

ಹುಬ್ಬಳ್ಳಿ: ಇದುವರೆಗೂ ಲಿಂಗಾಯತ ಪ್ರತ್ಯೇಕ ಧರ್ಮ ಎನ್ನುತ್ತಿದ್ದವರು ಈಗ ಅಲ್ಪಸಂಖ್ಯಾತ ಸ್ಥಾನಮಾನಕ್ಕೆ ಶಿಫಾರಸು ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚಿ ರಾಜಕೀಯ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ ಶೆಟ್ಟರ್​ ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.

ನ್ಯಾ. ನಾಗಮೋಹನ್​ ದಾಸ್​ ಸಮಿತಿ ನೇಮಿಸಿದ್ದು ಅಲ್ಪಸಂಖ್ಯಾತ ಆಯೋಗದಿಂದ, ಅವರು ಲಿಂಗಾಯತಕ್ಕೆ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಕುರಿತು ವರದಿ ನೀಡಿದ್ದಾರೆ. ಇದೊಂದು ರಾಜ್ಯ ಸರ್ಕಾರದ ಪ್ರಾಯೋಜಿತ ವರದಿ. ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರ ಸ್ಪಷ್ಟವಾಗಿಲ್ಲ. ಇದಕ್ಕೆ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದು ಶೆಟ್ಟರ್​ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

Back To Top