

ಬೈಂದೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಆಶ್ರಯದಲ್ಲಿ ಉಪ್ಪುಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಬದಕೋಣೆ ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯಿತು. ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ಕೆ.ನಾಯ್ಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಮುಖ್ಯಶಿಕ್ಷಕಿ ಶೋಭಾ ಡಿ.ಅಲ್ಮೇಡ ಅಧ್ಯಕ್ಷತೆ ವಹಿಸಿದ್ದರು. ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮಂಜುನಾಥ ಶೆಟ್ಟಿ, ವಿಶ್ವ ಕ್ರಿಕೆಟ್ ಆಟಗಾರ ಪೃಥ್ವಿರಾಜ್ ಶೆಟ್ಟಿ ಹುಂಚನಿ, ಅಂತಾರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತೆ ಧ್ವನಿತಾ ವಾಸು ಮೊಗೆರ ಅವರನ್ನು ಸನ್ಮಾನಿಸಲಾಯಿತು.
ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಅರುಣಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಬಾಡ, ವಿಶ್ವನಾಥ ಪೂಜಾರಿ, ಗುರುರಾಜ, ಪ್ರಭಾಕರ, ಜನಾರ್ದನ ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ 23 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಗೋವಿಂದರಾಜು ಸ್ವಾಗತಿಸಿ, ಶಿಕ್ಷಕಿಯರಾದ ಹೇಮಾ ಮತ್ತು ಸಂಧ್ಯಾ ನಿರೂಪಿಸಿದರು. ಶಿಕ್ಷಕ ರಾಮದಾಸ್ ನಾಯ್ಕ ವಂದಿಸಿದರು.