ಪ್ರತೀ ವಾರ ಹೋಬಳಿ ಪ್ರವಾಸ: ಸಂಸದೆ ಶೋಭಾ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ಉಡುಪಿ: ಸಂಸತ್ ಅಧಿವೇಶನ ಸಂದರ್ಭ ಹೊರತುಪಡಿಸಿ, ಪ್ರತೀ ಸೋಮವಾರ ಬೆಳಗ್ಗೆ ರಜತಾದ್ರಿ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಮಧ್ಯಾಹ್ನ ಬಳಿಕ ಹೋಬಳಿ ಪ್ರವಾಸ ಕೈಗೊಳ್ಳುತ್ತೇನೆ. ಮಂಗಳವಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು.

ಮಣಿಪಾಲ ರಜತಾದ್ರಿ ಜಿಪಂ ಸಂಕೀರ್ಣದಲ್ಲಿ ಸೋಮವಾರ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದರು.
ಸೋಮವಾರ ಮತ್ತು ಮಂಗಳವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಪಕ್ಷ ಸಂಘಟನೆಗೆ ರಾಜ್ಯ ಪ್ರವಾಸ. ಮುಂದಿನ ದಿನಗಳಲ್ಲಿ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರಲು ಪಕ್ಷವನ್ನು ಬಲಪಡಿಸಬೇಕಿದೆ. ಜಿಲ್ಲೆಯ ಬೇಡಿಕೆ ಬಗ್ಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. 3-4 ತಿಂಗಳಿನಿಂದ ಮರಳಿನ ಸಮಸ್ಯೆ ನಿವಾರಣೆ ಪ್ರಯತ್ನಿಸಿದರೂ ಫಲ ದೊರೆತಿಲ್ಲ. ಸ್ಥಳಿಯಾಡಳಿತ ಚುನಾವಣೆ ನಡೆದು 8 ತಿಂಗಳು ಕಳೆದಿದೆ. ಅಧ್ಯಕ್ಷ-ಉಪಾಧ್ಯಕ್ಷ ನೇಮಕ ನಡೆದಿಲ್ಲ. ನೀರಿನ ಸಮಸ್ಯೆ ಇದ್ದರೂ, ನಗರದಲ್ಲಿ ಟ್ಯಾಂಕರ್ ಪೂರೈಕೆ ಪ್ರಾರಂಭಿಸಿಲ್ಲ. ಹೀಗಾಗಿ ಜನರಿಗೆ ರಾಜ್ಯ ಸರ್ಕಾರ ಇದೆ ಎಂದೇ ಅನಿಸುತ್ತಿಲ್ಲ ಎಂದರು.

ಜಿಂದಾಲ್ ಕಂಪನಿಗೆ ಜಾಗ ಮಾರಾಟ: ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರ ಕಾನೂನು ಬಾಹಿರವಾಗಿ 3666 ಎಕರೆ ಜಾಗ ಕ್ರಯಪತ್ರ ಮಾಡಲು ಹೊರಟಿದೆ. ಯಾವುದೇ ಜಾಗವನ್ನು ಲೀಸ್‌ಗೆ ಕೊಡಬಹುದೇ ವಿನಾ ಮಾರಾಟ ಮಾಡುವಂತಿಲ್ಲ. ಆದರೆ ಸರ್ಕಾರ ಫಲವತ್ತಾದ ಜಮೀನು ಮಾರಾಟ ಮಾಡುತ್ತಿದೆ. ಇದರಲ್ಲಿ ಕಮಿಷನ್ ಏಜೆಂಟ್‌ಗಳ ಕೈವಾಡದ ಶಂಕೆ ಇದೆ. ಸಚಿವ ಸಂಪುಟ ವಿಸ್ತರಣೆ ರಾಜ್ಯ ಸರ್ಕಾರದ ಶವಪೆಟ್ಟಿಗೆಗೆ ಕೊನೆಯ ಮೊಳೆಯಾಗಲಿದೆ. ಕಾಂಗ್ರೆಸ್ ನಾಯಕರೇ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಭಿನ್ನಮತ ಉಲ್ಬಣಗೊಳ್ಳಲಿದೆ ಎಂದು ಶೋಭಾ ಹೇಳಿದರು.

14ರಿಂದ ರಾಜ್ಯವ್ಯಾಪಿ ಪ್ರತಿಭಟನೆ: 5 ವರ್ಷಗಳಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಯೋಜನೆಯಲ್ಲಿ ಕೇಂದ್ರದಿಂದ 7,100 ಕೋಟಿ ರೂ. ಅನುದಾನ ಲಭಿಸಿದೆ. ಆದರೆ ರಾಜ್ಯ ಸರ್ಕಾರ ಇದನ್ನು ಬರ ಪರಿಹಾರ ನಿರ್ವಹಣೆಗೆ ಬಳಸಿಲ್ಲ. ಬರದಿಂದ ಜನರು ಕಂಗೆಟ್ಟಿದ್ದು, ಕೆಲಸ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಒತ್ತಾಯಿಸಲು ಜೂನ್ 14ರಿಂದ 16ರವರೆಗೆ ರಾಜ್ಯಮಟ್ಟದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....