

ಮಡಿಕೇರಿ: ಮಾಜಿ ಶಾಸಕ ಕೆ.ಜಿ.ಬೋಪಯ್ಯರವರ ಪ್ರಯತ್ನದಿಂದ ೨೩ನೇ ವರ್ಷದ ಕೌಟುಂಬಿಕ ಹಾಕಿ ಉತ್ಸವ ಅಪ್ಪಚೆಟ್ಟೋಳಂಡ ಹಾಕಿ ನಮ್ಮೆಯ ರೂ.೧ ಕೋಟಿ ಅನುದಾನ ಲಭ್ಯವಾಗಿದೆ ಎಂದು ಹಾಕಿ ಉತ್ಸವ ಸಮಿತಿ ಸಂಚಾಲಕ ಅಪ್ಪಚೆಟ್ಟೋಳಂಡ ಮನುಮುತ್ತಪ್ಪ ತಿಳಿಸಿದರು.
ಹಾಕಿ ಉತ್ಸವದ ಲೋಗೋ ಬಿಡುಗಡೆಯನ್ನು ಮಾಜಿ ಶಾಸಕ ಕೆ.ಜಿ.ಬೋಪಯ್ಯರವರು ಆಗಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮುಖಾಂತರ ಮಾಡಿಸಿದ್ದರು. ಈ ಸಂದರ್ಭ ಹಾಕಿಗೆ ಪ್ರೋತ್ಸಾಹ ನೀಡುವ ಸಲುವಾಗಿ ೧ ಕೋಟಿ ಅನುದಾನ ನೀಡುತ್ತೇನೆ ಎಂದು ಭರವಸೆ ನೀಡಿದ್ದರು. ನಂತರ ಶಾಸಕರ ಆಶ್ರಯದಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಹಾಕಿ ಉತ್ಸವದ ವೆಚ್ಚಗಳ ದಾಖಲೆಗಳನ್ನು ನೀಡಿದ ಪರಿಣಾಮ ಇಂದು ಅನುದಾನ ಲಭ್ಯವಾಗಿದೆ. ಆದರೆ, ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಯಬಿಡುತ್ತಿರುವುದು ಸರಿಯಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹಾಕಿ ಉತ್ಸವ ಸಮಿತಿ ಉಪಾಧ್ಯಕ್ಷ ಭೀಮಯ್ಯ, ಸದಸ್ಯರಾದ ಪೂ ದೇವಯ್ಯ, ಡಾಲಿ ಬೋಪಯ್ಯ, ಶ್ಯಾಂ ಕಾಳಯ್ಯ, ರವಿ ಮೊಣ್ಣಪ್ಪ ಉಪಸ್ಥಿತರಿದ್ದರು.