More

    ಕೆರೆಗೋಡಿನಲ್ಲಿ 115 ದಿನದ ಬಳಿಕ ಹೊಸ ಧ್ವಜಾರೋಹಣ: ಗಾಳಿ, ಮಳೆಗೆ ಹಾಳಾಗಿದ್ದ ಧ್ವಜ

    ಮಂಡ್ಯ: ಹನುಮ ಧ್ವಜ ತೆರವು ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಗಮನಸೆಳೆದಿದ್ದ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಮಂಗಳವಾರ 115 ದಿನದ ಬಳಿಕ ಹಾಳಾಗಿದ್ದ ರಾಷ್ಟ್ರಧ್ವಜವನ್ನು ಕೆಳಗಿಳಿಸಿ ಜಿಲ್ಲಾಡಳಿತದಿಂದ ಹೊಸ ಧ್ವಜಾರೋಹಣ ಮಾಡಲಾಗಿದೆ.
    ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಹಾಗೂ ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ ಸಮ್ಮುಖದಲ್ಲಿ ಬೆಳ್ಳಂಬೆಳಗ್ಗೆ ಹೊಸ ಧ್ವಜವನ್ನು ಹಾರಿಸಲಾಗಿದೆ. ಈ ವೇಳೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
    ಈ ವೇಳೆ ಮಾತನಾಡಿದ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಕೆರಗೋಡು ಧ್ವಜಸ್ತಂಭದಲ್ಲಿ ಹಿಂದೆ ರಾಷ್ಟ್ರ ಧ್ವಜ ಹಾರಿಸಲಾಗಿತ್ತು. ಗಾಳಿಗೆ ಧ್ವಜ ಗಂಟಾಗಿ ಸರಿಯಾದ ರೀತಿಯಲ್ಲಿ ಹಾರಾಡುತ್ತಿರಲಿಲ್ಲ. ಹಾಗಾಗಿ ಈಗ ಹಳೇ ಧ್ವಜ ಬದಲಿಸಿ ಹೊಸ ತಿರಂಗ ಹಾರಿಸಲಾಗಿದೆ. ಹಿಂದೆ ಇದ್ದ ಅಳತೆಯಲ್ಲೇ ಹೊಸ ಧ್ವಜ ಹಾಕಲಾಗಿದೆ. ದೊಡ್ಡ ರಾಷ್ಟ್ರ ಧ್ವಜ ಹಾರಾಟಕ್ಕೆ ಮುಂದಿನದಿನಗಳಲ್ಲಿ ಕ್ರಮ ವಹಿಸಲಾಗುವುದು ಎಂದರು.ಇನ್ನು ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟು ದೊಡ್ಡ ಧ್ವಜ ಸ್ತಂಭಕ್ಕೆ ಚಿಕ್ಕ ಅಳತೆಯ ರಾಷ್ಟ್ರ ಧ್ವಜ ಹಾಕುವುದು ಸರಿಯಲ್ಲ. ಜಿಲ್ಲಾಡಳಿತ ನಡೆ ಅಸಮಾಧಾನ ತಂದಿದೆ. ದೊಡ್ಡ ಧ್ವಜ ಹಾರಿಸುವಂತೆ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಆದಾಗ್ಯೂ ತರಾತುರಿಯಾಗಿ ಹೊಸ ಧ್ವಜ ಹಾರಿಸಿದ್ದಾರೆ. ಇನ್ನು ನಮ್ಮ ಧ್ವಜ ಹೋರಾಟ ಇಲ್ಲಿಗೆ ನಿಲ್ಲಲ್ಲ. ಜೂ.4ರ ನಂತರ ಹನುಮ ಧ್ವಜ ಹೋರಾಟ ತೀವ್ರವಾಗಲಿದೆ. ಅದರ ಪರಿಣಾಮವನ್ನು ಸರ್ಕಾರ ಎದುರಿಸಲಿದೆ. ಮತ್ತೆ ಅರ್ಜುನ ಸ್ತಂಭದಲ್ಲಿ ಹನುಮ ಧ್ವಜ ಹಾರಾಡಬೇಕು. ರಾಷ್ಟ್ರೀಯ ಹಬ್ಬದ ಸಂದರ್ಭದಲ್ಲಿ ರಾಷ್ಟ್ರ ಧ್ವಜ ಹಾರಾಡಲು ಅಭ್ಯಂತರವಿಲ್ಲ. ಆದರೆ ಅರ್ಜುನ ಸ್ತಂಭ ನಿರ್ಮಾಣದ ಉದ್ದೇಶ ಹನುಮ ಧ್ವಜ ಹಾರಿಸುವುದು ಎಂದು ಗ್ರಾಮದ ಕೆಲವರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts