More

    ಸರ್ಕಾರ ಸೌಲಭ್ಯ ನೀಡುತ್ತಿಲ್ಲವೆಂದು ದೂರಬೇಡಿ

    ಹೊಳಲ್ಕೆರೆ: ಅಸಂಘಟಿತ ಕಾರ್ಮಿಕರು ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುವ ವಿವಿಧ ಸೌಲಭ್ಯಗಳ ಸದುಪಯೋಗ ಪಡೆದು ಪ್ರಗತಿ ಹೊಂದಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಪ್ರೇಮಾ ವಸಂತರಾವ್ ಪವಾರ್ ತಿಳಿಸಿದರು.

    ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಪಂ ಅಭಿಯೋಜನ ಇಲಾಖೆ, ಶಿಕ್ಷಣ, ಪೊಲೀಸ್, ಕಾರ್ಮಿಕ, ರಾಷ್ಟ್ರೀಯ ಬಾಲಕಾರ್ಮಿಕ, ಸಮಾಜ ಕಲ್ಯಾಣ, ಶಿಶು ಅಭಿವೃದ್ಧಿ ಇಲಾಖೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಗಳಿಂದ ಚಿಕ್ಕಜಾಜೂರು ಗ್ರಾಪಂ ಆವರಣದಲ್ಲಿ ಹಮ್ಮಿಕೊಂಡಿದ್ದ ಎಸ್‌ಸಿಪಿ ಯೋಜನೆಯಡಿ ದೊರೆವ ಸೌಲಭ್ಯ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಸಂಘಟಿತ, ಅಸಂಘಟಿತ, ಕಾರ್ಮಿಕ ಸಂಘಗಳ ಕಾರ್ಮಿಕರಿಗೆ ಕಾನೂನು ರೀತಿ ಸರ್ಕಾರ ಅನೇಕ ಸೌಲಭ್ಯ ನೀಡುತ್ತಿದೆ. ಆದರೆ, ಇವುಗಳ ಸದ್ಬಳಕೆಯಲ್ಲಿ ಸಂಘಗಳು ವಿಫಲವಾಗಿವೆ. ಇವುಗಳ ಬಗ್ಗೆ ಸಂಘಗಳ ನಾಯಕರು ತಿಳಿದು ಕಾರ್ಮಿಕರಿಗೆ ತಿಳಿಸುವ ಕೆಲಸ ಮಾಡಬೇಕು. ಸರ್ಕಾರ ಯಾವುದೇ ಸೌಲಭ್ಯ ಕಲ್ಪಿಸುತ್ತಿಲ್ಲವೆಂದು ದೂರುವುದು ಸರಿಯಲ್ಲ. ಇದಕ್ಕೆ ಮುಖ್ಯ ಕಾರಣ ಶಿಕ್ಷಣದ ಕೊರತೆ. ಈ ಸಮಸ್ಯೆಯಿಂದ ಹೊರಬರಬೇಕು ಎಂದು ತಿಳಿಸಿದರು.

    ಅಧ್ಯಕ್ಷತೆ ವಹಿಸಿದ್ದ ವಕೀಲರ ಸಂಘದ ಅಧ್ಯಕ್ಷ ಜಿ.ಇ.ರಂಗಸ್ವಾಮಿ, ಕಾರ್ಮಿಕರ ಕಲ್ಯಾಣ ಕಾರ್ಯಕ್ರಮ ಕುರಿತು ಮಾಹಿತಿ ನೀಡಿದರು.
    ಅಪರ ಸಿವಿಲ್ ನ್ಯಾಯಾಧೀಶ ಎನ್.ಎ.ನಾಗೇಶ್, ಸಂಘದ ಉಪಾಧ್ಯಕ್ಷ ಆರ್.ಜಗದೀಶ್, ಕಾರ್ಯದರ್ಶಿ ಪ್ರದೀಪ್ ಕುಮಾರ್, ಗ್ರಾಪಂ ಅಧ್ಯಕ್ಷ ಡಿ.ಸಿ.ಮೋಹನ್, ವಕೀಲರ ಕೆ.ಎಸ್.ಜಯದೇವ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts