ಹೊಳಲ್ಕೆರೆ: ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ಬಿ.ಇಡಿ ಕಾಲೇಜುಗಳ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು, ಮಲ್ಲಾಡಿಹಳ್ಳಿ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ರೇಷ್ಮಾಬಾನು 3 ನೇ ರ್ಯಾಂಕ್ನೊಂದಿಗೆ ತೇರ್ಗಡೆಯಾಗಿದ್ದಾಳೆ.
ಪರೀಕ್ಷೆಗೆ ಹಾಜರಾದ 36 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ಡಾ.ಜಿ.ಯು. ನಾಗರಾಜ್ ತಿಳಿಸಿದ್ದಾರೆ.