ಬ್ಯಾರೇಜ್ ನಿರ್ಮಾಣಕ್ಕೆ ಚಾಲನೆ

blank

ಹೊಳಲ್ಕೆರೆ: ಸರ್ಕಾರದಿಂದ ಕ್ಷೇತ್ರಕ್ಕೆ 1200 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ತಾಲೂಕಿನ ಪ್ರತಿ ಹಳ್ಳಿ ಅಭಿವೃದ್ಧಿಗೂ 1 ಕೋಟಿ ರೂ. ವರೆಗೆ ನೀಡಲಾಗಿದೆ ಎಂದು ಶಾಸಕ ಎಂ.ಚಂದ್ರಪ್ಪ ಹೇಳಿದರು.

ತಾಲೂಕಿನ ಚಿಕ್ಕನಕಟ್ಟೆಯ ಲಿಂಗೇಶ್ವರ ದೇವಸ್ಥಾನದ ಬಳಿಯ ಹಿರೇಹಳ್ಳಕ್ಕೆ 2.25 ಕೋಟಿ ರೂ. ಅನುದಾನದಲ್ಲಿ ಸೇತುವೆ ಹಾಗೂ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ರಸ್ತೆ, ಕೆರೆಗಳ ಅಭಿವೃದ್ಧಿ, ಶಾಲೆ, ಕಾಲೇಜು ಹಾಗೂ ಸಮುದಾಯ ಭವನಗಳ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ ಎಂದರು.

ಹಿರೇಹಳ್ಳ ಈ ಭಾಗದ ಜೀವನ ನದಿ ಇದ್ದಂತೆ. ತೋಟಗಾರಿಕೆ ಮತ್ತು ಕೃಷಿ ಕಾರ್ಯಗಳಿಗೆ ಹಳ್ಳದ ನೀರು ಆಧಾರವಾಗಿದೆ. ಆದ್ದರಿಂದ ಸೇತುವೆ ಮತ್ತು ಬ್ಯಾರೇಜ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿಯೇ ನಮ್ಮ ಗುರಿ. ಪ್ರತಿ ಹಳ್ಳಿಗೂ ಏನೆಲ್ಲ ಕಾರ್ಯಕ್ರಮ ಕೈಗೊಳ್ಳಬೇಕೆಂದು ನಿತ್ಯ ಚಿಂತನೆ ಮಾಡುತ್ತಿದ್ದೇನೆ. ಅದಕ್ಕೆ ಪೂರಕವಾಗಿ ಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆದುಕೊಳ್ಳುತ್ತಿದ್ದೇನೆ ಎಂದರು.

ಅಭಿವೃದ್ಧಿ ಕೆಲಸ ಮಾಡಿ ಎಂದು ಜನರು ಜನಪ್ರತಿನಿಧಿಗಳ ಬಳಿ ಅಲೆಯುವಂಥಹ ಕಾಲವಿದು. ಆದರೆ, ನಮ್ಮ ಕ್ಷೇತ್ರದ ಜನ ನಮ್ಮ ಊರಿಗೆ ಕೆಲಸ ಮಾಡಿಸಿ ಎನ್ನುವ ಮೊದಲೇ ಆ ಗ್ರಾಮಕ್ಕೆ ಬೇಕಾದ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇನೆ ಎಂದು ತಿಳಿಸಿದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…