More

    ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಕಂದಕ

    ಹೊಳಲ್ಕೆರೆ: ಜಾತಿ, ಧರ್ಮಗಳ ಮಧ್ಯೆ ಕಂದಕ ಉಂಟುಮಾಡಲೆಂದು ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ತೀವ್ರಗೊಳಿಸುವ ಅಗತ್ಯವಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.

    ಪಟ್ಟಣದ ಅಂಬೇಡ್ಕರ್ ಬಯಲು ರಂಗಮಂದಿರದಲ್ಲಿ ಗುರುವಾರ ಸಂವಿಧಾನ ರಕ್ಷಣಾ ಸಮಿತಿ ಹಮ್ಮಿಕೊಂಡಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.

    ಕೇಂದ್ರ ಸರ್ಕಾರ ಪೌರತ್ವ ಕಾಯ್ದೆ ಜಾರಿಗೊಳಿಸುವ ಮೂಲಕ ಸಮಾಜದ ಶಾಂತಿ ಕದಡಿದೆ. ಜಾತಿ, ಧರ್ಮ ನಡುವೆ ಬಿರುಕು ಮೂಡುವಂತೆ ಮಾಡಿದೆ. ಜನವಿರೋಧಿ ಸರ್ಕಾರದ ವಿರುದ್ಧ ಜನ ದೇಶದಲ್ಲಿ ದಂಗೆ ಎದ್ದಿದ್ದಾರೆ ಎಂದರು.

    ಬಿಜೆಪಿ ಏಕ ಪಕ್ಷೀಯ ನಿರ್ಧಾರ ತೆಗೆದುಕೊಳ್ಳುವ ಮೂಲಕ ಸಂವಿಧಾನ ಕಡೆಗಣಿಸುತ್ತಿದೆ. ಈ ದೇಶದ ಸ್ವಾತಂತ್ರೃಕ್ಕಾಗಿ ಗಾಂಧೀಜಿಯಂತಹ ಮಹಾನ್ ನಾಯಕರು ಪ್ರಾಣತೆತ್ತಿದ್ದಾರೆ. ಆದರೆ, ಕಮಲ ಪಕ್ಷದ ಯಾವೊಬ್ಬ ಸ್ವಾತಂತ್ರೃ ಚಳವಳಿಯಲ್ಲಿ ಪಾಲ್ಗೊಳ್ಳಲಿಲ್ಲ. ಆದರೂ ಸುಳ್ಳು ಹೇಕಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ ಎಂದು ದೂರಿದರು.

    ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, ದೇಶದಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದ ನಂತರ ಎಲ್ಲ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ, ಸ್ವಜನಪಕ್ಷಪಾತ ಹೆಚ್ಚಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಇಡೀ ದೇಶವೇ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ಕೂಡಲೇ ರದ್ದುಗೊಳಿಸಿ ಕದಡಿರುವ ಸಮಾಜದ ಶಾಂತಿ ಕಾಪಾಡಬೇಕು ಎಂದರು.

    ಮಾಜಿ ಶಾಸಕ ಎ.ವಿ.ಉಮಾಪತಿ ಮಾತನಾಡಿ, ನಾವೆಲ್ಲರು ಒಂದೇ ತಾಯಿ ಮಕ್ಕಳಂತೆ ಬಾಳುತ್ತಿದ್ದೆವು. ಇದನ್ನು ಸಹಿಸದ ಕೇಂದ್ರ ಸರ್ಕಾರ ಪೌರತ್ವ ಕಾಯ್ದೆ ಜಾರಿಗೊಳಿಸಿ ನಮ್ಮನ್ನು ಬೇರೆ ಮಾಡುತ್ತಿದೆ. ಇದು ಜಾತಿ, ಧರ್ಮ ವಿರುದ್ಧದ ಕಾಯ್ದೆ. ಇದನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

    ಜಿಪಂ ಸದಸ್ಯರಾದ ಎಮ್ಮೆಹಟ್ಟಿ ಕೃಷ್ಣಮೂರ್ತಿ, ಬಿ.ಪಿ.ಪ್ರಕಾಶ್‌ಮೂರ್ತಿ, ಪ್ರಿಯದರ್ಶಿನಿ, ಡಿ.ಕೆ.ಶಿವಮೂರ್ತಿ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಭವ್ಯಾ ನರಸಿಂಹಮೂರ್ತಿ, ಜಾಮಿಯಾ ಮಸೀದಿ ಮುತುವಲ್ಲಿ ಅಲ್ತಾಫ್ ಹುಸೇನ್, ಅಲೀಮುಲ್ಲಾ ಶರೀಫ್, ಸೈಯದ್ ಸಜೀಲ್, ಮನ್ಸೂರ್ ಅಲಿಖಾನ್, ಹಬೀಬುಲ್ಲಾ, ಅಲ್ಲಾಭಕ್ಷಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಧುಪಾಲೇಗೌಡ, ತಾಲೂಕು ಮಾಜಿ ಅಧ್ಯಕ್ಷ ಬಿ.ಎಸ್.ರುದ್ರಪ್ಪ, ಕುರುಬರ ಸಮಾಜದ ಅಧ್ಯಕ್ಷ ಬಿ.ಎಚ್.ಪ್ರಕಾಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts