More

    ಉಳ್ಳವರ ಪಾಲಾಗುತ್ತಿದೆ ಉಚಿತ ಹಾಲು

    ಹೊಳಲ್ಕೆರೆ: ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಸಮಸ್ಯೆ ಪರಿಹರಿಸಬೇಕಾದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಪ್ರಶ್ನಿಸಿದರು.

    ತಾಲೂಕಿನ ಸುಡುಗಾಡು ಸಿದ್ದರ ಕಾಲನಿಯ ಬಡವರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ಶುಕ್ರವಾರ ವಿತರಿಸಿ ಮಾತನಾಡಿ, ಸಚಿವರು ಜಿಲ್ಲೆ ಜನರಿಗೆ ಸಮರ್ಪಕವಾಗಿ ಕುಡಿವ ನೀರು ಪೂರೈಕೆ ವ್ಯವಸ್ಥೆ ಮಾಡುವಲ್ಲಿ ಕಾಳಜಿ ವಹಿಸಬೇಕು ಎಂದು ಒತ್ತಾಯಿಸಿದರು.

    ಲಾಕ್‌ಡೌನ್‌ನ ಈ ಸಂದರ್ಭದಲ್ಲಿ ಬಡವರಿಗೆ ಸಮರ್ಪಕವಾಗಿ ಆಹಾರ ವಿತರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿವೆ. ದಾನಿಗಳು ಪಿಎಂ ನಿಧಿಗೆ ಕೊಟ್ಟಿರುವ ಹಣವನ್ನು ನಿರ್ಗತಿಕರಿಗೆ ಹಂಚಲು ತಕ್ಷಣ ಕ್ರಮಕೈಗೊಳ್ಳಬೇಕು. ಈ ಮೂಲಕ ಬಡವರ ನೆರವಿಗೆ ಸರ್ಕಾರ ಬರಬೇಕು ಎಂದು ಆಗ್ರಹಿಸಿದರು.

    ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಗೊಂಡ ಅನೇಕ ಭಾಗ್ಯಗಳು ಲಾಕ್‌ಡೌನ್ ಸಂದರ್ಭದಲ್ಲಿ ಜನರ ಹಸಿವು ನೀಗಿಸುವ ಕೆಲಸ ಮಾಡುತ್ತಿವೆ. ಆದರೆ, ಸರ್ಕಾರ ಕೃಷಿಕರು, ಕಾರ್ಮಿಕರು ಸೇರಿ ವಿವಿಧ ಕ್ಷೇತ್ರದ ಜನರ ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

    ಕೃಷಿಕರು ಬಹಳಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ರೈತರು ಬೆಳೆದ ಹಣ್ಣು, ತರಕಾರಿ ಇತರೆ ಬೆಳೆಗಳನ್ನು ಖರೀದಿಸಿ ಬಡವರಿಗೆ ಉಚಿತವಾಗಿ ವಿತರಿಸಬೇಕು. ಜತೆಗೆ ಉಳ್ಳವರ ಪಾಲಾಗುತ್ತಿರುವ ಹಾಲು ಉಚಿತ ವಿತರಣೆಗೆ ಕಡಿವಾಣ ಹಾಕಲು ಕಡಿಮೆ ಬೆಲೆ ನಿಗದಿ ಮಾಡಿ ಹಾಲು ಮಾರಾಟ ಮಾಡಬೇಕು ಎಂದು ಸಲಹೆ ನೀಡಿದರು.

    ಪೊಲೀಸರು, ವೈದ್ಯರು, ವೈದ್ಯಕೀಯ ಸಿಬ್ಬಂದಿ, ಪೌರಕಾರ್ಮಿಕರು ಕರೊನಾ ತಡೆಗಾಗಿ ಹಗಲು-ರಾತ್ರಿ ಸೇವೆ ಸಲ್ಲಿಸುತ್ತಿದ್ದಾರೆ. ಕುಟುಂಬದ ಸದಸ್ಯರೆಲ್ಲರನ್ನೂ ತೊರೆದು ಜನಸೇವೆ ಮಾಡುತ್ತಿದ್ದಾರೆ. ಆದರೆ, ಬಹಳಷ್ಟು ಜನರು ಲಾಕ್‌ಡೌನ್ ಪಾಲಿಸುತ್ತಿಲ್ಲದಿರುವುದು ಬೇಸರ ತರಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

    ಸಾಮಾಜಿಕ ಅಂತರಕ್ಕೆ ಧಕ್ಕೆ ಉಂಟಾಗದಂತೆ ಜನರನ್ನು ದೂರ ದೂರದಲ್ಲಿ ಸಾಲಾಗಿ ನಿಲ್ಲಿಸಿ ಆಹಾರದ ಕಿಟ್ ವಿತರಿಸಲಾಯಿತು.

    ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಡಿ.ಕೆ.ಶಿವಮೂರ್ತಿ, ಮುಖಂಡರಾದ ಸುರೇಶ್, ವಿಜಯ್, ರಾಮಣ್ಣ, ತಿಪ್ಪೇಸ್ವಾಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts