More

    ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಅಗತ್ಯ

    ಹೊಳಲ್ಕೆರೆ: ತಾಲೂಕಿನ ಎಲ್ಲ ಪ್ರೌಢಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಡಿಸೆಂಬರ್‌ನಿಂದ ನಾಲ್ಕು ತಿಂಗಳ ಕಾಲ ಸತತವಾಗಿ ಪೂರಕ ಪರೀಕ್ಷೆ ನಡೆಸಿದರೆ ಶೇ.100ರಷ್ಟು ಫಲಿತಾಂಶ ಪಡೆಯಬಹುದು ಎಂದು ಜಿಪಂ ಸದಸ್ಯ ಮಹೇಶ್ವರಪ್ಪ ತಿಳಿಸಿದರು.

    ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತರಳಬಾಳು ನೌಕರರ ಕ್ಷೇಮಾಭಿವೃದ್ಧಿ ಸಂಘ ಮತ್ತು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಪಟ್ಟಣದ ಶಿಕ್ಷಕರ ಸದನದಲ್ಲಿ ಬುಧವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಸಾರ್ವಜನಿಕ ಶಿಕ್ಷಣ ಇಲಾಖೆ ವಿಷಯ ಪರಿವೀಕ್ಷಕ ತಿಪ್ಪೇಸ್ವಾಮಿ ಮಾತನಾಡಿ, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಜೀವನದ ತಿರುವಿನ ಘಟ್ಟ. ಈ ವೇಳೆ ರಸಪ್ರಶ್ನೆಯಂತಹ ಕಾರ್ಯಕ್ರಮ ಆಯೋಜಿಸುವುದು ಫಲಿತಾಂಶ ಹೆಚ್ಚಳ, ವಿಷಯ ಮನನಕ್ಕೆ ಸಹಕಾರಿಯಾಗುತ್ತದೆ ಎಂದರು.

    ಬಿಇಒ ಜಗದೀಶ್ವರ ಮಾತನಾಡಿ, ರಸಪ್ರಶ್ನೆ ಕಾರ್ಯಕ್ರಮ ಪಠ್ಯ ವಿಷಯಗಳ ಪುನರಾವರ್ತನೆ, ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಲು ಸಹಕಾರಿಯಾಗಿದೆ ಎಂದರು.

    ತರಳಬಾಳು ನೌಕರ ಸಂಘದ ಅಧ್ಯಕ್ಷ ಶಿವಪ್ಪ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಲೋಕೇಶ್, ಎಂ.ಎಂ.ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲೆ ನಿರ್ಮಲಾದೇವಿ, ಬಿಆರ್‌ಸಿ ತಿಪ್ಪೇಸ್ವಾಮಿ, ಬಸವರಾಜ, ರುದ್ರಯ್ಯ, ತರಳಬಾಳು ಸಂಘದ ಕಾರ್ಯದರ್ಶಿ ದೇವರಾಜಯ್ಯ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts